ಕಿರಾತ್ ಸ್ಪರ್ಧೆ: ಅಂಜುಮನ್ ವಿದ್ಯಾರ್ಥಿನಿ ತಿಯಾಬ್ ರಾಜ್ಯಮಟ್ಟಕ್ಕೆ ಆಯ್ಕೆ
ಭಟ್ಕಳ, ಅ. 8: ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತಿಯಾಬ್ ಆಫ್ತಾಬ್ ಹಾಜಿಫಕ್ಕಿ ಕಾರವಾರದಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾಳೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜುಕಾಕೋ ಅಬ್ದುಲ್ ರಹೀಮ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಲಯ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದ ಈಕೆ ಶನಿವಾರ ಕಾರವಾರ ದಲ್ಲಿ ಜರಗಿದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುರ್ ಆನ್ ಕಂಠಪಾಟ (ಕಿರಾತ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಪಾಲಕರು, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದು, ರಾಜ್ಯಮಟ್ಟದಲ್ಲಿಯೂ ಪ್ರಥಮ ಸ್ಥಾನಗಳಿಸಲಿ ಎಂದು ಹಾರೈಸಿದ್ದಾರೆ.
Next Story





