ಅ.10ರಂದು ಸಚಿವ ತನ್ವೀರ್ ಸೇಠ್ ಪ್ರವಾಸ
ಮಂಗಳೂರು, ಅ.9: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ತನ್ವೀರ್ ಸೇಠ್ ಅವರು ಅ.10ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.10ರಂದು ಬೆಳಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಹಝ್ರತ್ ಶೇಖ್ ಹಯಾತುಲ್ ಅವುಲಿಯಾ ದರ್ಗಾ ಮತ್ತು ಜುಮಾ ಮಸೀದಿ ವತಿಯಿಂದ ನಿರ್ಮಾಣ ಮಾಡಲಾಗಿರುವ ಶಾದಿಮಹಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ, ಸಂಜೆ 5 ಗಂಟೆಗೆ ಬೆಳ್ತಂಗಡಿಯಿಂದ ರಸ್ತೆ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





