ಅ. 11: ಕವಿ ನಿಸಾರ್ ಅಹ್ಮದ್‌ರೊಂದಿಗೆ ಸಂವಾದ
ಮಂಗಳೂರು, ಅ. 9: ನಿತ್ಯೋತ್ಸವ ಕವಿಯೆಂದೇ ಚಿರಪರಿಚಿತರಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಾಡೋಜ ಡಾ. ಕೆ.ಎಸ್. ನಿಸಾರ್ ಅಹ್ಮದ್ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಅ 11ರಂದು ಬೆಳಗ್ಗೆ 10:30ಕ್ಕೆ ನಗರದ ಪುರಭವನದ ಬಳಿಯಿರುವ (ಮಿನಿ ವಿಧಾನ ಸೌಧದ ಬಳಿ) ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಾಡಿಸಲಾಗಿದೆ.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಷಾ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹನಿರ್ದೇಶಕರು ಹಾಗೂ ಪ್ರಾಂಶುಪಾಲ ದಿವಾಕರ ಶೆಟ್ಟಿ ಎಚ್. ಉಪಸ್ಥಿತಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಆಸಕ್ತ ಸಾಹಿತ್ಯಾಭಿಮಾನಿಗಳೆಲ್ಲರೂ ಸಂವಾದದಲ್ಲಿ ಪಾಲ್ಗೊಳ್ಳುವಂತೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





