ಕೊಡಗು ಜಿಲ್ಲಾ ಘಟಕದ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಶಾಫಿ ಆಯ್ಕೆ

ಮಡಿಕೇರಿ, ಅ.9: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಕೊಡಗು ಜಿಲ್ಲಾ ಘಟಕದ ಸಾಮಾಜಿಕ ಜಾಲತಾಣದ ಸಂಚಾಲಕರನ್ನಾಗಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಕೊಟ್ಟಮುಡಿ ಅವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರು ಮಹಮ್ಮದ್ ಶಾಫಿ ಅವರನ್ನು ಸಂಚಾಲಕರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
Next Story





