ಉಗ್ರರೊಂದಿಗೆ ಗುಂಡಿನ ಚಕಮಕಿ : ಸೇನಾ ಜೆಸಿಒ ಹುತಾತ್ಮ

ಶ್ರೀನಗರ, ಅ. 9: ಜಮ್ಮು ಹಾಗೂ ಕಾಶ್ಮೀರದ ಬಡ್ಗಾಂವ್ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದು ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೆಸಿಒ ಮೃತಪಟ್ಟಿದ್ದಾರೆ. ಇಲ್ಲಿನ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರಕಿದ ಬಳಿಕ ರವಿವಾರ ಮಧ್ಯರಾತ್ರಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭದ್ರತಾ ಪಡೆ ಸುತ್ತುವರಿಯುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದರು. ಪರಿಣಾಮ ಗಂಭೀರ ಗಾಯಗೊಂಡ ಸುಬೇದಾರ್ ರಾಜ್ ಕುಮಾರ್ ಮೃತಪಟ್ಟರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಗ್ರರು ನಡೆಸಿದ ದಾಳಿಗೆ ಭದ್ರತಾ ಪಡೆ ಪ್ರತಿ ದಾಳಿ ನಡೆಸಿತು. ಈ ಸಂದರ್ಭ ಜೆಸಿಒ ಗಂಭೀರ ಗಾಯಗೊಂಡು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
Next Story





