ಮೊಟಾರ್ ಕಾಯಿದೆ ಉಲ್ಲಂಘನೆ15 ಬಸ್ಗಳ ವಿರುದ್ಧ ಕ್ರಮ
ಮಂಗಳೂರು, ಅ. 9: ಮೋಟಾರು ಕಾಯಿದೆ ನಿಯಮ ಉಲ್ಲಂಘಿಸಿದ ಹಾಗೂ ಪ್ರಯಾಣಿಕರಿಗೆ ಟಿಕೆಟ್ ನೀಡದ ಬಸ್ಗಳ ವಿರುದ್ಧ ಆರ್ಟಿಒ ಮತ್ತು ಸಂಚಾರಿ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ 15 ಬಸ್ಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರ್ಟಿಒ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರು ನಗರದಲ್ಲಿ ತಪಾಸಣೆ ನಡೆಸಿದ್ದು, ಈ ಸಂದರ್ಭ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 7 ಕಾಂಟ್ರ್ಯಾಕ್ಟ್ ಕ್ಯಾರಿಯೇಜ್ ಬಸ್ ಮತ್ತು 8 ಸಿಟಿ ಬಸ್ಗಳ ವಿರುದ್ಧ ಕ್ರಮಕೈಗೊಂಡಿದ್ದಾರೆ.
Next Story