ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಮೃತ್ಯು

ಸೊರಬ, ಅ.11: ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ಬುಧವಾರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಉಳವಿ ಹೋಬಳಿ ಮಳಲಗದ್ದೆ ಗ್ರಾಮದ ಸೊರಬ-ಸಾಗರ ರಸ್ತೆ ಬಳಿ ಟಾಟಾ ಏಸ್ ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಓರ್ವ ಗಾಯಗೋಮಡಿದ್ದಾನೆ.
ಮೃತರನ್ನು ಕೋಳಿಸಾಲು ಗ್ರಾಮದ ಗಣಪತಿ (39) ಎಂದು ಗುರುತಿಸಲಾಗಿದೆ.
ಗಾಯಾಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಶಿಗ್ಗಾ ಗ್ರಾಮದ ಬಳಿ ಮಂಗಳವಾರ ಸಂಜೆ ಬೈಕ್ ಸ್ಕಿಡ್ ಆದ ಪರಿಣಾಮ ವಿಶ್ವನಾಥ (26) ತೀವ್ರ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಸಿಪಿಐ ಉಮಾಪತಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





