ಮೈಸೂರು: ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು, ಅ.11: ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
ಬೋಗಾದಿ ನಿವಾಸಿ ರೋಹಿತ್ ಗೌಡ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ರೋಹಿತ್ ಗೌಡ ಮಂಗಳವಾರ ರಾತ್ರಿ ಮನೆಯಲ್ಲಿ ಎಲ್ಲರೂ ಇರುವಾಗಲೇ ನೇಣಿಗೆ ಶರಣಾಗಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯಲಾಗಿತ್ತು. ಆದರೆ ಆಸ್ಪತ್ರೆಯ ವೈದ್ಯರು ಆತ ಸಾವನ್ನಪ್ಪಿರುವುದಾಗಿ ಮಾಹಿತಿ ನೀಡಿದ್ದಾರೆ.
ರೋಹಿತ್ ಗೌಡ ಸದಾ ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಎಂದು ಅಲ್ಲಿನ ಸ್ಥಳೀಯರಿಂದ ತಿಳಿದು ಬಂದಿದ್ದು, ಆತ ಬ್ಲೂವೇಲ್ ಗೇಮ್‍ಗೆ ಬಲಿಯಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮನೆಯವರು ಯಾವುದೇ ದೂರನ್ನು ದಾಖಲಿಸಿಲ್ಲ. ಸರಸ್ವತಿಪುರಂ ಠಾಣೆಯ ಪೊಲೀಸರು ವಿಚಾರಿಸಲಾಗಿದ್ದು, ದೂರನ್ನು ದಾಖಲಿಸುವುದಿಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
Next Story





