ಮೈಸೂರು: ಯುವತಿ ಆತ್ಮಹತ್ಯೆ
ಮೈಸೂರು,ಅ.11: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಆರ್. ನಗರ ಕುಪ್ಪೆ ಗ್ರಾಮದ ನಿವಾಸಿ ಪೂಜಾ(19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಎಲ್ ಆ್ಯಂ ಡ್ ಟಿ ಕಂಪೆನಿಯಲ್ಲಿ ಈಕೆ ಕೆಲಸ ಮಾಡುತ್ತಿದ್ದಳು. ಎಂದಿನಂತೆ ಕೆಲಸ ಮುಗಿಸಿಕೊಂಡು ಬಂದ ಪೂಜಾ ವಿಜಯನಗರದಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





