ಐಎಎಸ್-ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅ.11: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ರಾಜ್ಯ ಸರಕಾರವು, ತಲಾ 9 ಮಂದಿ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗದ ಸಹಾಯಕ ಆಯುಕ್ತ-ಕೆ.ನಿತೀಶ್, ಹಾಸನ ಜಿಲ್ಲೆಯ ಸಕಲೇಶಪುರ ಉಪ ವಿಭಾಗದ ಸಹಾಯಕ ಆಯುಕ್ತ-ಜಿ.ಲಕ್ಷ್ಮಿಕಾಂತ ರೆಡ್ಡಿ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಉಪ ವಿಭಾಗದ ಸಹಾಯಕ ಆಯುಕ್ತೆ-ಬಿ.ಫೌಝಿಯಾ ತರನ್ನುಮ್‌ರನ್ನು ವರ್ಗಾವಣೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಸವಣೂರು ಉಪ ವಿಭಾಗದ ಸಹಾಯಕ ಆಯುಕ್ತ-ಮುಹಮ್ಮದ್ ರೋಷನ್, ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪ ವಿಭಾಗದ ಸಹಾಯಕ ಆಯುಕ್ತ-ಗಾರ್ಗಿ ಜೈನ್, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಉಪ ವಿಭಾಗದ ಸಹಾಯಕ ಆಯುಕ್ತ-ಟಿ.ಭೂಬಾಲನ್‌ರನ್ನು ವರ್ಗಾವಣೆ ಮಾಡಲಾಗಿದೆ.
ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಸಹಾಯಕ ಆಯುಕ್ತ- ಡಾ.ಪಿ.ರಾಜ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪ ವಿಭಾಗದ ಸಹಾಯಕ ಆಯುಕ್ತೆ-ಕೆ.ಲಕ್ಷ್ಮೀಪ್ರಿಯಾ ಹಾಗೂ ಕಲಬುರಗಿ ಜಿಲ್ಲೆಯ ಸೇಡಂ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ಡಾ.ಬಿ.ಸುಶೀಲಾರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೆಎಎಸ್: ಕಾರವಾರ ಜಿಲ್ಲೆಯ ಸೀಬರ್ಡ್ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ-ರಮೇಶ್ ಕಳಸದ್, ಉತ್ತರ ಕನ್ನಡ ಜಿಲ್ಲೆಯ ಡಿಯುಡಿಸಿ ಯೋಜನಾ ನಿರ್ದೇಶಕ-ಶಿವಾನಂದ್ ಬಿ.ಕರಳೆ, ಚಾಮರಾಜನಗರ ಜಿಲ್ಲೆಯ ಶ್ರೀ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ-ಎಂ.ಜೆ.ರೂಪಾ. ಹಾಸನ ಜಿಲ್ಲೆಯ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ- ಪಿ.ಶಿವರಾಜು, ಕಲಬುರಗಿ ಜಿಲ್ಲೆಯ ಜೆಸ್ಕಾಂನ ಪ್ರಧಾನ ವ್ಯವಸ್ಥಾಪಕ-ಪರಶುರಾಮ ಮಾದರ್, ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತೆ-ಡಾ.ಎ.ಸೌಜನ್ಯಾ, ವಿಜಯಪುರ ಡಿಯುಡಿಸಿ ಯೋಜನಾ ನಿರ್ದೇಶಕ-ಮಹಾದೇವ್ ಎ.ಮುರಗಿ, ರಾಣೆಬೆನ್ನೂರು ತಾಲೂಕಿನ ರಾಜ್ಯ ನೀರಾವರಿ ನಿಗಮದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ-ಸಿದ್ದಪ್ಪ ಹುಲ್ಲೋಳಿ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಉಪ ಆಯುಕ್ತರನ್ನಾಗಿ ಟಿ.ವಿ.ಪ್ರಕಾಶ್‌ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.







