ಕೇಂದ್ರವೇ ತೆರಿಗೆ ಕಡಿತ ಮಾಡಲಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅ.11: ಪೆಟ್ರೋಲ್, ಡಿಸೇಲ್ ಸೇರಿದಂತೆ ತೈಲೋತ್ಪನ್ನಗಳ ಮೇಲಿನ ತೆರಿಗೆಯನ್ನು ಕೇಂದ್ರ ಸರಕಾರವೇ ಕಡಿಮೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆಗ್ರಹಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲೂ ನಮ್ಮ ರಾಜ್ಯದ ಡೀಸೆಲ್ ಮತ್ತು ಪೆಟ್ರೋಲ್ ದರ ಕಡಿಮೆ ಇದೆ ಎಂದು ಹೇಳುವ ಮೂಲಕ ಪೆಟ್ರೋಲ್ ಮೇಲಿನ ತೆರಿಗೆ ಕಡಿತಕ್ಕೆ ನಿರಾಕರಿಸಿದರು. ಅನ್ಯ ರಾಜ್ಯಗಳಿಗಿಂತಲೂ ಕರ್ನಾಟಕ ರಾಜ್ಯದ ಡೀಸೆಲ್ ಮತ್ತು ಪೆಟ್ರೋಲ್ ದರ ಕಡಿಮೆ. ಅದಕ್ಕೂ ಮೇಲ್ಪಟ್ಟು ತೈಲೋತ್ಪನ್ನಗಳ ಮೇಲಿನ ತೆರಿಗೆ ಕಡಿಮೆ ಮಾಡಬೇಕಾದರೆ ಕೇಂದ್ರ ಸರಕಾರವೇ ಮಾಡಲಿ ಎಂದು ಅವರು ಇದೇ ವೇಳೆ ಒತ್ತಾಯ ಮಾಡಿದರು.
Next Story





