ಅ.12ರಂದು ಸಿಎಂ ದಿಲ್ಲಿಗೆ ಪ್ರವಾಸ

ಬೆಂಗಳೂರು, ಅ. 11: ಕೇಂದ್ರ ಇಂಧನ ಮತ್ತು ಕಲ್ಲಿದ್ದಲು ಸಚಿವರನ್ನು ಭೇಟಿಯಾಗುವ ಪೂರ್ವನಿಗದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ.12ರಂದು ಬೆಳಗ್ಗೆ 10ಗಂಟೆಯ ಸುಮಾರಿಗೆ ವಿಶೇಷ ವಿಮಾನದಲ್ಲಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಅ.12ರಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಇಂಧನ ಸಚಿವರು, ಕಲ್ಲಿದ್ದಲು ಸಚಿವರನ್ನು ಭೇಟಿಯಾಗಲಿದ್ದು, ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಅ.12ರಂದು ಸಂಜೆ 4ಕ್ಕೆ ಕರೆದಿರುವ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ(ಅ.13) ಮಧ್ಯಾಹ್ನ 1 ಗಂಟೆಗೆ ಸಿದ್ದರಾಮಯ್ಯನವರು ಬೆಂಗಳೂರಿಗೆ ಹಿಂದಿರುಗಲಿದ್ದಾರೆಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.
Next Story





