ಜಾವೆಲಿನ್ ಎಸೆತ: ಶಮ್ಸ್ ಪ್ರೌಢಶಾಲೆ ವಿದ್ಯಾರ್ಥಿ ಫರ್ಜಾದ್ ರಾಜ್ಯ ಮಟ್ಟಕ್ಕೆ ಆಯ್ಕೆ

ಭಟ್ಕಳ, ಅ. 11: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಫರ್ಜಾದ್ ಆಹ್ಮದ್ ಜಾವೆಲಿನ್ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ.
ಬುಧವಾರ ತಾಲೂಕಿನ ಬೆಳಕೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರಗಿದ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಭಲ್ಲೆ ಎಸೆತ (ಜಾವೆಲಿನ್ ಥ್ರೋ) ಸ್ಪರ್ಧೆಯಲ್ಲಿ 45ಮೀ ದೂರ ಎಸೆಯುವುದರ ಮೂಲಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್, ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ, ದೈಹಿಕ ಶಿಕ್ಷಣ ತರಬೇತುದಾರ ಮಹೇಶ್ ನಾಯ್ಕ ಅಭಿನಂದಿಸಿದ್ದು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಳ್ಳಲಿ ಎಂದು ಹಾರೈಸಿದ್ದಾರೆ.
Next Story





