ಮಾಜಿ ಸಿಎಂ ಚಾಂಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು: ಪಿಣರಾಯಿ ವಿಜಯನ್

ತಿರುವನಂತಪುರ, ಅ. 8: ಏಳು ದಶಲಕ್ಷ ರೂಪಾಯಿಯ ಸೋಲಾರ್ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಈ ಹಗರಣದಲ್ಲಿ ಭಾಗಿಯಾಗಿರುವ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸೋಲಾರ್ ಹಗರಣದಲ್ಲಿ ಚಾಂಡಿ ಹಾಗೂ ಅವರ ಕಚೇರಿ ಭಾಗಿಯಾಗಿದೆ ಎಂದು ಸೋಲಾರ್ ಹಗರಣದ ತನಿಖೆ ನಡೆಸಿರುವ ತನಿಖಾ ಆಯೋಗ ಹೇಳಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.
ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಹೊಸ ತನಿಖೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
Next Story





