ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ
ಉಡುಪಿ, ಅ.11: ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಇಂದು ಅಧಿಕಾರಿಗಳ ಸಭೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವ್ಯಸ್ಥಿತವಾಗಿ ನಡೆಸುವ ಸಂಬಂಧ ಸಭೆಯಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಹೊಣೆಗಳನ್ನು ವಹಿಸಲಾಯಿತು. ನ.1ರಂದು ಬೆಳಗ್ಗೆ 7 ಗಂಟೆಗೆ ಉಡುಪಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲ್ಲಿ ಅಧಿಕಾರಿಗಳು ಹಾಗೂ ಟ್ಯಾಬ್ಲೋ ಮತ್ತು ಮೆರವಣಿಗೆಗಳ ತಂಡ ಹಾಜರಿರಬೇಕೆಂದು ಸೂಚಿಸಿದ ಅವರು, ಬೋರ್ಡ್ ಹೈಸ್ಕೂಲ್‌ನಿಂದ ಬೀಡಿನಗುಡ್ಡೆಯವರೆಗೆ 7:30ಕ್ಕೆ ಮೆವಣಿಗೆ ಸಾಗುವುದೆಂದು ತಿಳಿಸಿದರು.
ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಟ್ಯಾಬ್ಲೋ ತಂಡಗಳು ಪಾಲ್ಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೆರವಣೆಗೆಯಲ್ಲಿ ನಾಲ್ಕು ಸಾಂಸ್ಕೃತಿಕ ತಂಡ, ಹೈಸ್ಕೂಲ್-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವರು. ಬೀಡಿನಗುಡ್ಡೆ ಕಾರ್ಯಕ್ರಮ ನಡೆಯುವಲ್ಲಿ ವೇದಿಕೆ ಸಮಿತಿ, ಪಥಸಂಚಲನ ಸಮಿತಿ, ಸ್ವಾಗತ ಸಮಿತಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಹೆಚ್ಚುವರಿ ಎಸ್‌ಪಿ ಕುಮಾರ್‌ಚಂದ್ರ, ಡಿವೈಎಸ್‌ಪಿ ಕುಮಾರಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ಧನ್, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಅಂತೋನಿ, ನಿರ್ಮಿತಿಯ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಶಿಕ್ಷಣ ಇಲಾಖೆ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.