ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ 83ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮತ್ತು ಸ್ವಾಗತ ಸಮಿತಿ ಕಾರ್ಯಾಲಯದ ಉದ್ಘಾಟನೆ ಗುರುವಾರ ನಡೆಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಚಿತ್ರ ಕಲಾವಿದ ಕೆ.ಎನ್.ಶಂಕರಪ್ಪ ಅವರು ರಚಿಸಿರುವ ಸಮ್ಮೇಳನದ ಲಾಂಛನವನ್ನು ಅನಾವರಣಗೊಳಿಸಿದರು. ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್(ಸಿಪಿಕೆ), ಜಿಲ್ಲಾ ಕಸಾಪ ಅಧ್ಯಕ್ಷ ವೈ.ಡಿ.ರಾಜಣ್ಣ, ಮತ್ತಿತರರು ಉಪಸ್ಥಿತರಿದ್ದರು.
Next Story





