Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿಷಯ ವೈವಿಧ್ಯಗಳ ‘ಹಿಮವರ್ಷ’

ವಿಷಯ ವೈವಿಧ್ಯಗಳ ‘ಹಿಮವರ್ಷ’

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ13 Oct 2017 12:31 AM IST
share
ವಿಷಯ ವೈವಿಧ್ಯಗಳ ‘ಹಿಮವರ್ಷ’

 ‘‘ಆಡು ಮುಟ್ಟದ ಸೊಪ್ಪಿಲ್ಲ, ಜೋಕಟ್ಟೆ ಬರೆಯದ ವಸ್ತುಗಳಿಲ್ಲ’’ ಎನ್ನುವ ಗಾದೆ ಶ್ರೀನಿವಾಸ ಜೋಕಟ್ಟೆಯವರ ಬರಹಗಳಿಗೆ ಚೆನ್ನಾಗಿ ಒಪ್ಪುತ್ತದೆ. ಜೋಕಟ್ಟೆಯೆಂದರೆ ಬರಹಗಳ ಅಣೆಕಟ್ಟೆ ಒಡೆದಂತೆ. ಇದು ಅವರ ಬರಹಗಳ ಮಿತಿಯೂ ಹೌದು. ಕಂಡದ್ದನ್ನು ತಕ್ಷಣ ಬರೆದು ಬಿಡುವ ಅವರ ಆಸಕ್ತಿ, ಕೆಲವೊಮ್ಮೆ ವಿಷಯದಾಳಕ್ಕೆ ಇಳಿಯಲು ವಿಫಲವಾಗುತ್ತದೆ. ಅಂದರೆ ವಿಷಯದ ಮೇಲ್ಮೈಯಿಂದ ಸರಾಗವಾಗಿ ಅವರು ಮುಂದು ಹೋಗುತ್ತಾರೆ. ಬರಹದ ಅವಸರ ಕೆಲವೊಮ್ಮೆ ಆ ವಸ್ತುಗಳನ್ನು ಪೂರ್ಣವಾಗಿ ಕಟ್ಟಿಕೊಡಲು ವಿಫಲವಾಗಬಹುದು. ಪತ್ರಕರ್ತರು ಸದಾ ಅವಸರದ ಕುದುರೆಯೇರಿ ಕುಳಿತಿರುವುದರಿಂದ ಅವರ ಹೆಚ್ಚಿನ ಲೇಖನಗಳು ತಕ್ಷಣದ ಅಗತ್ಯವಾಗಿರುತ್ತವೆ. ಜೋಕಟ್ಟೆಯವರ ಹಿಮವರ್ಷದಲ್ಲಿರುವ 34 ಲೇಖನಗಳು ವೈವಿಧ್ಯ ವಿಷಯಗಳನ್ನು ಒಳಗೊಂಡಿವೆ. ಕುತೂಹಲಕಾರಿ ಮಾಹಿತಿಗಳನ್ನು ನೀಡುತ್ತವೆ. ಜನಪ್ರಿಯ ಮಾದರಿಯ ಬರಹಗಳು ಇದಾಗಿರುವುದರಿಂದ, ಸಂಕೀರ್ಣತೆಯಿಲ್ಲ. ಸರಳತೆ ಅವರ ನಿರೂಪಣೆಯ ಹೆಗ್ಗಳಿಕೆ. ಈ ಕೃತಿಯಲ್ಲಿ ಬೇರೆ ಬೇರೆ ಕ್ಷೇತ್ರಗಳನ್ನು ಜೋಕಟ್ಟೆ ಮುಟ್ಟಿ ನೋಡಿದ್ದಾರೆ. ಪ್ರವಾಸ ಕಥನವಿದೆ. ಡ್ಯಾನ್ಸ್ ಬಾರ್‌ನ ಪಿಂಕಿ, ಬಬ್ಲಿಯರ ಅಂತರಂಗವಿದೆ. ಮುಂಬಯಿಯಲ್ಲಿ ಕನ್ನಡ ಅಕ್ಷರ ಸೇವೆ ಮಾಡುವ ನವೀನ್ ಪ್ರಿಂಟರ್ಸ್ ಕುರಿತ ವಿವರಗಳಿವೆ. ಕನ್ನಡ-ಮರಾಠಿ ಸಂಬಂಧಗಳ ಚರ್ಚೆಯಿದೆ. ಮುಂಬೈ ಕನ್ನಡದ ಹಿರಿಮೆಯ ಬಗ್ಗೆ ಬರೆಯುತ್ತಾರೆ. ಬಾಲಿವುಡ್, ಬ್ಲೂಫಿಲಂ, ಬಗ್ಗೆಯೂ ಬರೆಯುವ ಇವರು ಮಗದೊಂದೆಡೆ ನೇಪಾಳ-ಕರ್ನಾಟಕದ ನಡುವಿನ ಸಂಬಂಧಗಳನ್ನೂ ಕಟ್ಟಿಕೊಡುತ್ತಾರೆ. ಹಾಗೆಯೇ ಕೆಲವು ವೈಚಾರಿಕ ಬರಹಗಳೂ ಇಲ್ಲಿವೆ. ಸಾಂಸ್ಕೃತಿಕ ವಿಷಯಗಳನ್ನೂ ಅವರು ಆರಿಸಿಕೊಂಡಿದ್ದಾರೆ. ಇಲ್ಲಿರುವ ಎಲ್ಲ ಬರಹಗಳು ಬೇರೆ ಬೇರೆ ಕಾರಣಗಳಿಗಾಗಿ ನಮ್ಮಲ್ಲಿ ಓದುವ ಉತ್ಸಾಹವನ್ನು ಮೂಡಿಸುತ್ತವೆೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದಿತ್ಯ ಪಬ್ಲಿಕೇಶನ್ಸ್ ಬೆಳಗಾವಿ ಇವರು ಪ್ರಕಟಿಸಿರುವ ಈ ಕೃತಿಯ ಮುಖಬೆಲೆ 145 ರೂಪಾಯಿ. ಪುಟಗಳು 144. ಆಸಕ್ತರು 098693 94694 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X