ಗಾಂಜಾ ಮಾರಾಟ: ಆರೋಪಿ ಬಂಧನ

ಮಂಗಳೂರು, ಅ. 13: ನಗರದ ಕುದ್ರೋಳಿ ಕರ್ನಲ್ ಗಾರ್ಡನ್ ಬಳಿ ಶುಕ್ರವಾರ ದಾಳಿ ನಡೆಸಿರುವ ಇಕೊನಾಮಿಕ್ ಆ್ಯಂಡ್ ನಾರ್ಕೊಟಿಕ್ ಕ್ರೈಂ ಠಾಣಾ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅನೀಷ್ ಅಶ್ರಫ್ ಎಂದು ಗುರುತಿಸಲಾಗಿದೆ.
ಆರೋಪಿಯಿಂದ 6,300 ರೂ. ಬೆಲೆಯ 270 ಗ್ರಾಂ ಗಾಂಜಾ ಮತ್ತು ಗಾಂಜಾ ಮಾರಾಟ ಮಾಡಿದ 700 ರೂ. ನಗದು ಹಣವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶದಂತೆ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾಪ್ರಶಾಂತ್ ನಿರ್ದೇಶನದಲ್ಲಿ ಪೊಲೀಸ್ ನಿರೀಕ್ಷಕ ಮುಹಮ್ಮದ್ ಶರೀಫ್, ಸಿಬ್ಬಂದಿಗಳಾದ ಜಗದೀಶ್, ಶಾಜು ನಾಯರ್, ಕಿಶೋರ್ ಪೂಜಾರಿ ಮತ್ತು ಭಾಸ್ಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story





