Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಸ್ತಾವನೆ ಕುರಿತು ಸೂಕ್ತ ಆದೇಶ...

ಪ್ರಸ್ತಾವನೆ ಕುರಿತು ಸೂಕ್ತ ಆದೇಶ ಹೊರಡಿಸಲು ರೈಲ್ವೆ ಮಂಡಳಿಗೆ ಹೈಕೋರ್ಟ್ ನಿರ್ದೇಶನ

ಶ್ರವಣಬೆಳಗೊಳ, ಕಂಕನಾಡಿ ಜಂಕ್ಷನ್ ಮೂಲಕ ಪ್ರತ್ಯೇಕ ರೈಲು ಓಡಿಸುವ ವಿಚಾರ

ವಾರ್ತಾಭಾರತಿವಾರ್ತಾಭಾರತಿ13 Oct 2017 10:20 PM IST
share

ಬೆಂಗಳೂರು, ಅ.13: ಬೆಂಗಳೂರಿಂದ ಕಾರವಾರಕ್ಕೆ ನಡುವೆ ಹೊಸದಾಗಿ ನಿರ್ಮಾಣಗೊಂಡಿರುವ ಶ್ರವಣಬೆಳಗೊಳ, ಕಂಕನಾಡಿ ಜಂಕ್ಷನ್ ಮೂಲಕ ಪ್ರತ್ಯೇಕ ರೈಲು ಓಡಿಸುವ ಪ್ರಸ್ತಾವನೆ ಕುರಿತು ಮೂರು ತಿಂಗಳಲ್ಲಿ ಸೂಕ್ತ ಆದೇಶ ಹೊರಡಿಸಬೇಕು ಎಂದು ರೈಲ್ವೆ ಮಂಡಳಿಗೆ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.

ಬೆಂಗಳೂರು-ಕಾರವಾರ ನಡುವೆ ಪ್ರತಿನಿತ್ಯ ಸಂಚರಿಸುವ ಎಕ್ಸ್‌ಪ್ರೆಸ್ ರೈಲನ್ನು ಹೊಸದಾಗಿ ನಿರ್ಮಾಣಗೊಂಡಿರುವ ಕುಣಿಗಲ್ ರೈಲು ಮಾರ್ಗಕ್ಕೆ ಬದಲಿಸಲು ನೈರುತ್ಯ ರೈಲ್ವೆ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಸಂಜಯ್ ರೇವಣಕರ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಹಾಸನ-ಸಕಲೇಶಪುರ-ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ಘಟ್ಟಗಳು ಹೆಚ್ಚಿವೆ. ಇನ್ನು ಈ ಮಾರ್ಗವು ಪೂರಕ ಸಾಮರ್ಥ್ಯ ಹೊಂದಿಲ್ಲ. ಒಂದೊಮ್ಮೆ ಮಾರ್ಗ ಬದಲಿಸಿದರೆ ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಯ ನಿವಾಸಿಗಳು ಮಂಗಳೂರಿನ ಸಂಪರ್ಕ ಹೊಂದುವುದಕ್ಕೆ ಕಷ್ಟವಾಗುತ್ತದೆ. ಹೀಗಾಗಿ, ಬೆಂಗಳೂರು-ಕಾರವಾರ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲನ್ನು ಕುಣಿಗಲ್ ಮಾರ್ಗಕ್ಕೆ ಬದಲಿಸಲು ಸಾಧ್ಯವಿಲ್ಲ ಎಂದು ನೈರುತ್ಯ ರೈಲ್ವೆ ಇಲಾಖೆ ಕಳೆದ ಆ.11ರಂದು ಹೈಕೋರ್ಟ್‌ಗೆ ತಿಳಿಸಿತ್ತು.

ಇದನ್ನು ಒಪ್ಪದಿದ್ದ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ನಿಲುವು ತಿಳಿಸುವಂತೆ ರೈಲ್ವೆ ಇಲಾಖೆಗೆ ಸೂಚಿಸಿ ವಿಚಾರಣೆ ಮುಂದೂಡಿತ್ತು. ಅರ್ಜಿ ಶುಕ್ರವಾರ ಮತ್ತೆ ವಿಚಾರಣೆಗೆ ಬಂದಿತ್ತು. ಈ ವೇಳೆ ಬೆಂಗಳೂರು-ಕಾರವಾರ, ಕಣ್ಣೂರು ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ಕುಣಿಗಲ್ ಮಾರ್ಗವಾಗಿ ವಾರಕ್ಕೆ ನಾಲ್ಕು ದಿನ ಓಡಿಸಲು ನೈರುತ್ಯ ರೈಲ್ವೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿ ಅ.11ರಂದು ಒಪ್ಪಿತ್ತು. ಈ ವಿಚಾರವನ್ನು ಶುಕ್ರವಾರ ವಿಚಾರಣೆ ವೇಳೆ ಹೈಕೋರ್ಟ್ ಗಮನಕ್ಕೆ ತರಲಾಯಿತು.

ಈ ಹಿನ್ನೆಲೆಯಲ್ಲಿ ಅರ್ಜಿದಾರರು ಕುಣಿಗಲ್ ಮಾರ್ಗವಾಗಿ ಬೆಂಗಳೂರು-ಮಂಗಳೂರಿಗೆ ಪ್ರತ್ಯೇಕ ರೈಲು ಓಡಿಸುವ ವಿಚಾರದಲ್ಲಿ ಮಾರ್ಗ ನಕ್ಷೆಯೊಂದನ್ನು ಸಿದ್ಧಪಡಿಸಬೇಕು. ಅದರೊಂದಿಗೆ ಈ ವಿಚಾರದಲ್ಲಿ ಇಲ್ಲಿಯವರೆಗೂ ನಡೆದ ಎಲ್ಲ ಬೆಳವಣಿಗಳ ಮಾಹಿತಿ ಹಾಗೂ ದಾಖಲೆಗಳನ್ನು ರೈಲ್ವೆ ಮಂಡಳಿಗೆ ಮನವಿ ಪತ್ರ ಸಲ್ಲಿಸಬೇಕು. ರೈಲ್ವೆ ಮಂಡಳಿ ಆ ಮನವಿ ಸ್ವೀಕರಿಸಿ ಮೂರು ತಿಂಗಳಲ್ಲಿ ಅರ್ಜಿದಾರರ ಅಹವಾಲು ಆಲಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.

ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರವೀಂದ್ರ ಜಿ.ಕೊಳ್ಳೆ ವಾದಿಸಿ, ಕುಣಿಗಲ್ ಮಾರ್ಗದ ಮೂಲಕ ಕಾರವಾರಕ್ಕೆ ರೈಲು ಸೇವೆ ಆರಂಭಿಸಿದರೆ ಬೆಂಗಳೂರಿನಿಂದ ಕಾರವಾರ ತಲುಪುವ ಸಮಯ 4 ತಾಸು ಕಡಿತವಾಗಲಿದೆ. ಮೈಸೂರು ಮಾರ್ಗದಲ್ಲಿ ರೈಲು ಸಂಚಾರ ಮಾಡಬೇಕು ಎಂದು ಹೇಳುವುದಾದರೆ, ಆ ಮಾರ್ಗದಲ್ಲೂ ರೈಲು ಓಡಿಸಿ, ಕುಣಿಗಲ್ ಮಾರ್ಗದಲ್ಲಿಯೂ ಪ್ರತ್ಯೇಕ ರೈಲು ಸಂಚಾರ ಆರಂಭಿಸಬಹುದು ಎಂದು ಕೋರ್ಟ್ ಗಮನಕ್ಕೆ ತಂದರು.

 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X