Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೂಲ ನಿವಾಸಿಗಳ ಹಕ್ಕುಗಳಿಗಾಗಿ ಧ್ವನಿ...

ಮೂಲ ನಿವಾಸಿಗಳ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕಿದೆ: ಮುಹಮ್ಮದ್‌ ನಝೀರ್‌ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ14 Oct 2017 8:18 PM IST
share

ಬೆಂಗಳೂರು, ಅ.14: ಮುಸ್ಲಿಮ್ ಸಮುದಾಯದ ನಾಯಕರು ಹಾಗೂ ಉಲೇಮಾಗಳು ಮುಸ್ಲಿಮರ ಹಕ್ಕುಗಳ ಬಗ್ಗೆ ಮಾತನಾಡುವಾಗ ದೇಶದ ಮೂಲ ನಿವಾಸಿಗಳಾದ ದಲಿತರು, ಹಿಂದುಳಿದ ವರ್ಗದವರು, ಆದಿವಾಸಿಗಳ ಹಕ್ಕುಗಳ ಬಗ್ಗೆಯೂ ಧ್ವನಿ ಎತ್ತಬೇಕಿದೆ ಎಂದು ಜೆಡಿಯು ರಾಷ್ಟ್ರೀಯ ಶಿಸ್ತು ಸಮಿತಿಯ ಮಾಜಿ ಅಧ್ಯಕ್ಷ ಮುಹಮ್ಮದ್ ನಝೀರ್‌ ಅಹ್ಮದ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೂಲ ನಿವಾಸಿಗಳ ಹಕ್ಕುಗಳ ಬಗ್ಗೆ ನಾವು ಧ್ವನಿ ಎತ್ತಿದಾಗ ಮಾತ್ರ ಅವರ ವಿಶ್ವಾಸವನ್ನು ಗಳಿಸಲು ಸಾಧ್ಯ. ಶೋಷಣೆಗೆ ಒಳಗಾದ, ಅವಕಾಶ ವಂಚಿತ ಸಮುದಾಯಗಳ ಬಗ್ಗೆ ನಮ್ಮ ಗಮನ ಹರಿಸಬೇಕಿದೆ ಎಂದರು.

ದೇಶದಲ್ಲಿನ ಆಡಳಿತ ವರ್ಗವು ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಆಸಕ್ತಿ ತೋರುತ್ತಿಲ್ಲ. ಧರ್ಮ, ಜಾತಿಯ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಪರಸ್ಪರ ಕಚ್ಚಾಡುವಂತೆ ಮಾಡಲಾಗುತ್ತಿದೆ. ಆ ಮೂಲಕ ಜನರಿಗೆ ಸಂವಿಧಾನದಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಧ್ವನಿ ಎತ್ತದಂತೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗುತ್ತಿದೆ ಎಂದು ಹೇಳಿದರು.

ದೇಶದ ಮೂಲ ನಿವಾಸಿಗಳನ್ನು ಕೇವಲ ಓಟ್ ಬ್ಯಾಂಕ್‌ಗಾಗಿ ಬಳಕೆ ಮಾಡಲಾಗುತ್ತಿದೆ. ಜಾತ್ಯತೀತ ಹಾಗೂ ಕೋಮುವಾದದ ಹೆಸರಿನಲ್ಲಿ ಇಲ್ಲಿ ನಡೆಯುತ್ತಿರುವ ರಾಜಕಾರಣವು, ವಿಶ್ವದ ಯಾವುದೇ ದೇಶದಲ್ಲಿ ನಡೆಯುತ್ತಿಲ್ಲ. ಮುಂದುವರೆದ ರಾಷ್ಟ್ರಗಳಲ್ಲಿ ಕೇವಲ ಎರಡು ಪಕ್ಷಗಳು ಮಾತ್ರ ಇರುತ್ತವೆ ಎಂದು ನಝೀರ್‌ ಅಹ್ಮದ್ ತಿಳಿಸಿದರು.

ಹಿಂದೂ ರಾಷ್ಟ್ರ ನಿರ್ಮಾಣದ ಬಗ್ಗೆ ಇತ್ತೀಚೆಗೆ ಹೆಚ್ಚಿನ ಚರ್ಚೆಗಳು ನಡೆಯುತ್ತಿವೆ. ಆದರೆ, ಹಿಂದೂ ರಾಷ್ಟ್ರದ ಪರಿಕಲ್ಪನೆ ಹೇಗಿರುತ್ತದೆ, ಅದರಲ್ಲಿ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಸ್ಥಾನಮಾನವೇನು, ದಲಿತರು, ಆದಿವಾಸಿಗಳು, ಹಿಂದುಳಿದವರಿಗೆ ಸಮಾನವಾದ ಹಕ್ಕುಗಳು ಲಭ್ಯವಾಗುತ್ತವೆ ಎಂಬ ಪ್ರಶ್ನೆಗಳಿಗೆ ಹಿಂದೂ ರಾಷ್ಟ್ರದ ಪರ ವಕಾಲತ್ತು ನಡೆಸುವವರ ಬಳಿ ಯಾವುದೇ ಉತ್ತರವಿಲ್ಲ ಎಂದರು.

ಹೆಚ್ಚಿನ ಪ್ರಮಾಣದಲ್ಲಿ ಮೂಲ ನಿವಾಸಿಗಳೆ ಮತದಾನ ಮಾಡುತ್ತಾರೆ. ಆದರೆ, ಆಡಳಿತ ವರ್ಗ ಅವರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಾತ್ರ ಆಸಕ್ತಿ ತೋರುತ್ತಿಲ್ಲ. ಆದುದರಿಂದ, ಈ ಮತದಾನ ಮಾಡುವ ವರ್ಗವು ತನ್ನದೇ ಆದ ರಾಜಕೀಯ ಪಕ್ಷವನ್ನು ಸ್ಥಾಪಿಸಬೇಕಿದೆ. ದೇಶದಲ್ಲಿ ಮುಸ್ಲಿಮ್ ಸಮುದಾಯದ ನಾಯಕತ್ವವಿಲ್ಲ. ಮೊದಲು ಅದನ್ನು ಸೃಷ್ಟಿಸಬೇಕಿದೆ. ಸಮಾನ ನಾಗರಿಕ ಸಂಹಿತೆಯ ಹೆಸರಿನಲ್ಲಿ ಮುಸ್ಲಿಮರಲ್ಲಿ ಆತಂಕದ ವಾತಾವರಣ ನಿರ್ಮಿಸಲು ಯತ್ನಿಸಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಅನುಷ್ಠಾನ ಸಾಧ್ಯವಿಲ್ಲ ಎಂದು ಹೇಳಿದರು.

ಹಿಂದೂ ರಾಷ್ಟ್ರ, ಸಮಾನ ನಾಗರಿಕ ಸಂಹಿತೆ, ವಂದೇ ಮಾತರಂ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಒಂದೇ ಮನೆಯ ಎರಡು ಬಾಗಿಲುಗಳಿದ್ದಂತೆ. ಆದುದರಿಂದ, ನಾವು ಬಾಗಿಲು ಬದಲಿಸುವ ಬದಲು ಮನೆಯನ್ನೆ ಬದಲಾಯಿಸುವುದು ಉತ್ತಮ ಎಂದುನೀಡಿದರು.

ದೇಶದಲ್ಲಿ ರಾಜಕೀಯ ನಡೆಯುತ್ತಿಲ್ಲ. ಬದಲಾಗಿ, ರಾಜಕೀಯದ ಸೋಗಿನಲ್ಲಿ ಮತದಾರ ವರ್ಗದ ವಿರುದ್ಧ ಒಂದು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಆಳುವ ವರ್ಗವು ಮತದಾನ ಮಾಡುವವರನ್ನು ಶಾಶ್ವತವಾಗಿ ಗುಲಾಮರನ್ನಾಗಿಸಲು ಬಯಸುತ್ತಿದೆ ಎಂದು ನಝೀರ್‌ ಅಹ್ಮದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X