Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸದ ಪ್ರತಾಪ್ ಸಿಂಹರಿಂದ ಸುಳ್ಳು ಆರೋಪ :...

ಸಂಸದ ಪ್ರತಾಪ್ ಸಿಂಹರಿಂದ ಸುಳ್ಳು ಆರೋಪ : ಟಿ.ಪಿ.ರಮೇಶ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ15 Oct 2017 7:25 PM IST
share
ಸಂಸದ ಪ್ರತಾಪ್ ಸಿಂಹರಿಂದ ಸುಳ್ಳು ಆರೋಪ : ಟಿ.ಪಿ.ರಮೇಶ್ ಟೀಕೆ

ಮಡಿಕೇರಿ,ಅ.15 :ಕೇಂದ್ರ ಸರಕಾರ ಜಾರಿಗೆ ತಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅದು ತನ್ನ ಸರಕಾರದ ಕಾರ್ಯಕ್ರಮವೆಂದು ಹೇಳುತ್ತಿರುವುದಾಗಿ ಸಂಸದರಾದ ಪ್ರತಾಪ್ ಸಿಂಹ ಅವರು ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆಗಳಲ್ಲಿ ಹೇಳುತ್ತಿರುವುದು ಶೋಭೆ ತರುವುದಿಲ್ಲವೆಂದು ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಟಿ.ಪಿ.ರಮೇಶ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರಕಾರ ಜನಪರವಾದ ನೂರಾರು ಕಾರ್ಯಕ್ರಮಗಳನ್ನು ಕಳೆದ ನಾಲ್ಕೂವರೆ ವರ್ಷಗಳಲ್ಲಿ ಅನುಷ್ಠಾನಗೊಳಿಸಿದ್ದು, ಅದ್ಯಾವುದೂ ಕೇಂದ್ರ ಸರಕಾರದ ಯೋಜನೆಗಳಲ್ಲವೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ಪಕ್ಷದ ಸರಕಾರವಿದ್ದರೂ ಕೇಂದ್ರ ಸರಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಾಗಿರುವುದು ಸರಕಾರದ ಕರ್ತವ್ಯವಾಗಿರುತ್ತದೆ. 

ರಾಜ್ಯ ಸರಕಾರದ ವಿನೂತನ ಕಾರ್ಯಕ್ರಮಗಳನ್ನು ಕೇಂದ್ರದ ಕಾರ್ಯಕ್ರಮಗಳೊಂದಿಗೆ ತಾಳೆ ಹಾಕಲು ಸಾಧ್ಯವಿಲ್ಲವೆಂದಿರುವ ಅವರು ಸಿದ್ದರಾಮಯ್ಯ ಸರಕಾರ ಜಾರಿಗೆ ತಂದಿರುವ ಅನೇಕ ಕಲ್ಯಾಣ ಕಾರ್ಯಕ್ರಮಗಳು ದೇಶ ವ್ಯಾಪಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ರಮೇಶ್ ತಿಳಿಸಿದ್ದಾರೆ. ಹಸಿವು ಮುಕ್ತ ಕರ್ನಾಟಕದ ಅನ್ನಭಾಗ್ಯ ಯೋಜನೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ದಿನವೇ ಜಾರಿಗೆ ತಂದ ಮೊದಲ ಕಾರ್ಯಕ್ರಮವಾಗಿದೆ. ಶಾಲಾ ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದ ಕ್ಷೀರ ಭಾಗ್ಯ ಯೋಜನೆ ಇದೀಗ ಅಂಗನವಾಡಿ ಕೇಂದ್ರದಲ್ಲಿರುವ ಮಕ್ಕಳವರೆಗೂ ತಲುಪಿದೆ. ವಿದ್ಯಾಸಿರಿ ಯೋಜನೆ ಬಡವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ಕಾರ್ಯಕ್ರಮವಾಗಿದೆ. 

ಅನಾರೋಗ್ಯಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಲು ಆರೋಗ್ಯ ಶ್ರೀ ಯೋಜನೆ, ರೈತ-ಕೃಷಿಕರ ಅಭ್ಯುದಯಕ್ಕಾಗಿ ಜಾರಿಗೊಳಿಸಿದ ಕೃಷಿಭಾಗ್ಯ ಯೋಜನೆ, ಗರ್ಭಿಣಿ ಮಹಿಳೆಯರಿಗಾಗಿ ಜಾರಿಗೆ ಬಂದ ಮಾತೃಪೂರ್ಣ ಯೋಜನೆ, ಬಡ, ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವಿವಾಹಕ್ಕಾಗಿ ಜಾರಿಗೊಳಿಸಿದ ಬಿದಾಯಿ ಯೋಜನೆಗಳೆಲ್ಲವೂ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಪ್ರಗತಿಪರ ಕಾರ್ಯಕ್ರಮಗಳಾಗಿದ್ದು, ಇವುಗಳು ಯಾವುದೂ ಕೇಂದ್ರ ಸರಕಾರದ ಕಾರ್ಯಕ್ರಮಗಳಲ್ಲವೆಂದು ಅವರು ಹೇಳಿದ್ದಾರೆ. ಸಹಕಾರ ಸಂಘಗಳಿಂದ ಸಾಲ ಪಡೆದ ರೈತರ ರೂ.50 ಸಾವಿರ ಮನ್ನಾ ಮಾಡಿದ ನಿರ್ಧಾರ ಮುಖ್ಯಮಂತ್ರಿಗಳು ತೆಗೆದುಕೊಂಡ ದಿಟ್ಟ ಹೆಜ್ಜೆಯಾಗಿದೆ. ಆದರೆ ಕೇಂದ್ರ ಸರಕಾರ ಇಲ್ಲಿಯವರೆಗೂ ರೈತರ ಪರವಾದ ಯಾವುದೇ ಕಾಳಜಿಯನ್ನು ತೋರಿಲ್ಲ. 

ಪ್ರಗತಿಪರ ಚಿಂತಕರಾಗಿ ಜನಪರ ಕಾಳಜಿಯನ್ನಿಟ್ಟು ಕಳೆದ ವಿಧಾನಸಭಾ ಚುನಾವಣೆಯ ಮೊದಲು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಸಲ್ಲುತ್ತದೆ. ಬಡವರ, ರೈತರ, ದುರ್ಬಲರ, ಮಹಿಳಾ ಮತ್ತು ಮಕ್ಕಳ ಪರವಾದ ಹಾಗೂ ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದಿಟ್ಟ ಕಾರ್ಯಕ್ರಮಗಳು ಅನುಷ್ಠಾನಗೊಂಡಿದ್ದು, ದೇಶದ ಯಾವ ರಾಜ್ಯದಲ್ಲೂ ಈ ಮಟ್ಟದ ಕಲ್ಯಾಣ ಕಾರ್ಯಕ್ರಮಗಳು ನಡೆದಿಲ್ಲ ಎಂಬುವುದನ್ನು ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಸಾಬೀತು ಮಾಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜನಸಮುದಾಯಗಳ ಬದುಕಿಗೆ ಹೊಸ ಸ್ಫೂರ್ತಿಯನ್ನು ತುಂಬಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ರಮೇಶ್ ಹೇಳಿದ್ದಾರೆ.

ದೇವಾಲಯಗಳು, ಚರ್ಚ್, ಮದರಸ ಹಾಗೂ ವಿವಿಧ ಪ್ರಾರ್ಥನಾ ಮಂದಿರಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಸಹಕರಿಸಿ ಸರ್ವಧರ್ಮ ಸಮನ್ವಯತೆಯನ್ನು ಸಾಧಿಸಿದ್ದಾರೆ. ಹಿಂದುಳಿದ ವರ್ಗಗಳಿಗೆ ಶೇ.70 ಮೀಸಲಾತಿ ತರುವ ನಿರ್ಧಾರಕ್ಕೆ ಮುಖ್ಯಂತ್ರಿಗಳು ಬಂದಿದ್ದು, ಇದು ಅನುಷ್ಠಾನಗೊಂಡಲ್ಲಿ ಪ್ರವರ್ಗ 1, 2 ಎ, 3 ಎ ಮತ್ತು 3 ಬಿ ಅಡಿಯಲ್ಲಿ ಬರುವ ಸಮುದಾಯಗಳಿಗೆ ಇದರಿಂದ ಹೆಚ್ಚಿನ ಸೌಲಭ್ಯ ದೊರಕಲು ಸಾಧ್ಯವಿದೆ ಎಂದು ಅವರು ಹೇಳಿದ್ದಾರೆ. 

ಬಸವಣ್ಣನವರ ಭಾವಚಿತ್ರವನ್ನು ಸರಕಾರಿ ಕಚೇರಿಗಳಲ್ಲಿ ಹಾಕುವ ಮೂಲಕ 800 ವರ್ಷಗಳ ಹಿಂದೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದ ಬಸವಣ್ಣನವರನ್ನು ಎಲ್ಲರೂ ನೆನಪಿಸುವಂತೆ ಮಾಡಲಾಗಿದೆ. ಬಿಜಾಪುರ ಮಹಿಳಾ ವಿವಿಗೆ ಕಿತ್ತೂರು ಚೆನ್ನಮ್ಮನ ಹೆಸರು, ಬೆಂಗಳೂರು ರೈಲು ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರು, ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣಗೊಳಿಸಿ ಕನ್ನಡ ನಾಡು, ನುಡಿ ಇತಿಹಾಸವನ್ನು ಗಟ್ಟಿಗೊಳಿಸುವ ಕೆಲಸವನ್ನು ಈ ಸರಕಾರ ಮಾಡಿದೆ. 

ಅಧಿಕಾರ ವಿಕೇಂದ್ರೀಕರಣದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮತ್ತು ಸದಸ್ಯರುಗಳಿಗೆ ಗೌರವ ಸಂಭಾವನೆ ಏರಿಕೆ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಗೆ ಗೌರವ ಸಂಭಾವನೆ ಏರಿಕೆ, 94 ಸಿ ಮತ್ತು 94 ಸಿಸಿ ಕಾಯ್ದೆಯಡಿಯಲ್ಲಿ ಸರಕಾರಿ ನಿವೇಶನದಲ್ಲಿ ಮನೆ ಕಟ್ಟಿ ಕುಳಿತವರಿಗೆ ನಿವೇಶನದ ಹಕ್ಕುಪತ್ರ ವಿತರಣೆ ಹೀಗೆ ರಾಜ್ಯ ಸರಕಾರದ ಹತ್ತು ಹಲವು ಕಾರ್ಯಕ್ರಮಗಳು ಜನಮೆಚ್ಚುಗೆಯನ್ನು ಪಡೆದಿವೆ. ಇಂದಿರಾ ಕ್ಯಾಂಟೀನ್‍ನ್ನು ಜಿಲ್ಲಾ ಮತ್ತು ತಾಲ್ಲೂಕು ಹಂತದವರೆಗೆ ವಿಸ್ತರಿಸಲು, ಯಶಸ್ವಿನಿ ಯೋಜನೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಲು, ಸ್ತ್ರೀಶಕ್ತಿ ಸಂಘಗಳ ಸದಸ್ಯರ ಸ್ವಾವಲಂಬನೆಯ ಬದುಕಿಗೆ ಆರ್ಥಿಕ ಸೌಲಭ್ಯ, ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ತೀರಾ ಬಡ ಬಗ್ಗರಿಗೆ ಮನೆ ನಿವೇಶನಗಳ ವಿತರಣೆ ಮತ್ತು ಬುಡಕಟ್ಟು ಸಮುದಾಯಗಳ ಏಳಿಗೆಗಾಗಿ ವಿಶೇಷ ಕಾರ್ಯಕ್ರಮಗಳು ರಾಜ್ಯದಲ್ಲಿ ತ್ವರಿತವಾಗಿ ಜಾರಿಯಾಗುತ್ತಿದ್ದು, ಇವುಗಳೆಲ್ಲವೂ ರಾಜ್ಯ ಸರಕಾರದ ಕಾರ್ಯಕ್ರಮವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಬರಪೀಡಿತ ಪ್ರದೇಶದಲ್ಲಿ ಮೋಡ ಬಿತ್ತನೆ ಕಾರ್ಯಕ್ರಮಗಳು ಹಾಗೂ ಕೇಂದ್ರ ಸರಕಾರದ ಸುಲಭ ಶೌಚಾಲಯಗಳ ನಿರ್ಮಾಣ, ಸ್ವಚ್ಛ ಭಾರತದ ಕಾರ್ಯಕ್ರಮಗಳನ್ನು ನಾಡಿನೆಲ್ಲೆಡೆ ಯಶಸ್ವಿಯಾಗಿ ಮಾಡಲಾಗಿದೆ.

 ಕೇಂದ್ರ ಸರಕಾರದ ಧ್ವಂಧ್ವ ನಿಲುವುಗಳಿಂದಾಗಿ ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. ಜಿಡಿಪಿ ದರ ಇಳಿಮುಖದತ್ತ ಸಾಗಿದೆ. ಮುಂದಕ್ಕೆ ದೇಶದ ಆರ್ಥಿಕ ಪರಿಸ್ಥಿತಿ ಏನಾಗಬಹುದೆನ್ನುವ ಆತಂಕ ಎಲ್ಲರಲ್ಲು ಎದುರಾಗಿದೆ. ಏಕನೀತಿಯ ಜಿಎಸ್‍ಟಿಯನ್ನು ರಾಷ್ಟ್ರಾದ್ಯಂತ ಕೇಂದ್ರ ಸರಕಾರ ಜಾರಿಗೊಳಿಸಿದ್ದು, ಸ್ವಾಗತವಾದರೂ ಸ್ವದೇಶಿ ತಯಾರಿಕಾ ವಸ್ತುಗಳ ಮೇಲೆ ವಿಧಿಸಿರುವ ತೆರಿಗೆಗಳು ಅಧಿಕವಾಗಿದ್ದು, ಇದು ನಮ್ಮ ದೇಶದ ಜನಸಾಮಾನ್ಯರ ಮೇಲೆ ದುಷ್ಪರಿಣಾಮ ಬೀರಿದೆ. 

 ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನಪರವಾದ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರೆಸಿದ್ದು, ಇದು ಪಕ್ಷಕ್ಕೆ ಶ್ರೀರಕ್ಷಯಾಗಿದೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲವೆಂದು ರಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X