Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ...

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ದಶಮಾನೋತ್ಸವ ಹಾಗೂ ಮಾಧ್ಯಮ ಪ್ರಶಸ್ತಿ-2017 ಪ್ರದಾನ

ವಾರ್ತಾಭಾರತಿವಾರ್ತಾಭಾರತಿ15 Oct 2017 10:24 PM IST
share
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ದಶಮಾನೋತ್ಸವ ಹಾಗೂ ಮಾಧ್ಯಮ ಪ್ರಶಸ್ತಿ-2017  ಪ್ರದಾನ

ದಾವಣಗೆರೆ,ಅ.15: ಪತ್ರಕರ್ತರ ಮಕ್ಕಳಿಗೆ ಪಿಯುಸಿ ಹಂತದವರೆಗೂ ನಮ್ಮ ಬಾಪೂಜಿ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.

ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ದಶಮಾನೋತ್ಸವ ಹಾಗೂ ಮಾಧ್ಯಮ ಪ್ರಶಸ್ತಿ-2017 ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ನಮ್ಮ ತಂದೆ, ಶಾಸಕ ಶಾಮನೂರು ಶಿವಶಂಕರಪ್ಪ ಅವರು ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ಕಾಲರ್‍ಶಿಪ್ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಪತ್ರಕರ್ತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಕ್ರಮಕೈಗೊಳ್ಳಲಾಗುವುದು ಎಂದ ಅವರು, ಬೆಂಗಳೂರು ಹಾಗೂ ಮೈಸೂರಿನಲ್ಲಿರುವ ಪ್ರೆಸ್‍ಕ್ಲಬ್‍ಗಳಂತೆ ಇಲ್ಲಿಯೂ ಸುಸಜ್ಜಿತ ಸ್ವಂತ ಪ್ರೆಸ್‍ಕ್ಲಬ್ ನಿರ್ಮಿಸಲು ಸಂಪೂರ್ಣ ಬೆಂಬಲ ನೀಡಲಾಗುವುದೆಂದರು.

ಪತ್ರಕರ್ತರು ಯಾವುದೇ ಆಸೆ, ಆಮಿಷಯಕ್ಕೆ ಒಳಗಾಗದೇ ನಿಷ್ಪಕ್ಷಪಾತವಾಗಿ ವರದಿ ನೀಡಬೇಕು. ವರದಿಗಾರರ ಕೂಟದ ಮುಖ್ಯಸ್ಥರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಾಗಬೇಕು. ಹಳೆಯ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಕಾರ್ಯವಾಗಬೇಕೆಂದರು.

ದಶಮಾನೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್, ಪತ್ರಕರ್ತರು ನಿಜವಾದ ಅಂಶವನ್ನು ಪರಿಶೀಲಿಸಿ ಅದು ಸರಿ ಅಥವಾ ತಪ್ಪಿದ್ದರೂ ಬರೆಯುವ ಮನೋಭಾವ ರೂಢಿಸಿಕೊಳ್ಳಬೇಕು. ಸಮಾಜದ ಲೋಪದೋಷಗಳನ್ನು ಬರವಣೆಗೆಯ ಮೂಲಕ ತಿದ್ದುವ ಕಾರ್ಯವಾಗಬೇಕೆಂದರು.
ಕುವೆಂಪು ವಿವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ.ಎಸ್. ಪೂರ್ಣಾನಂದ ವಿಶೇಷ ಉಪನ್ಯಾಸ ನೀಡುತ್ತಾ, ವರ್ಷದಿಂದ ವರ್ಷಕ್ಕೆ ವಿದೇಶಗಳಲ್ಲಿ ಮುದ್ರಣ ಮಾದ್ಯಮಗಳು ಅವನತಿ ಅಂಚಿನತ್ತಾ ಸಾಗಿವೆ. ಆದರೆ, ಭಾರತದಲ್ಲಿ ಇದು ವ್ಯತಿರಿಕ್ತವಾಗಿದ್ದು ವರ್ಷದಿಂದ ವರ್ಷಕ್ಕೆ ಮುದ್ರಣ ಮಾದ್ಯಮಗಳು ಹೆಚ್ಚಾಗುತ್ತಿರುವ ಜೊತೆಗೆ ಓದುಗರ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಸಂತಸದ ವಿಚಾರ ಎಂದ ಅವರು, ಭಾರತದಲ್ಲಿ ಮುಂದಿನ 20-30 ವರ್ಷಗಳವರೆಗೂ ಮುದ್ರಣ ಮಾದ್ಯಮ ಬೆಳೆಯಲಿದೆ ಎಂದು ಅವರು ತಿಳಿಸಿದರು.

ಎಲ್ಲಿಯವರೆಗೆ ಮಾದ್ಯಮಗಳು ಚಂದಾದಾರರನ್ನು ಅವಲಂಬಿಸಿರುತ್ತವೋ ಅಲ್ಲಿಯವರೆಗೆ ಪತ್ರಿಕಾ ಸ್ವಾತಂತ್ರ ಸಿಗುವುದಿಲ್ಲ. ಸಾಮಾಜಿಕ ಜಾಲತಾಣಗಳು ಅತ್ಯಂತ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಘಟನೆ ನಡೆದ ಕ್ಷಣಾರ್ಧದಲ್ಲಿ ಮಾಹಿತಿ ಹರಡುತ್ತವೆ. ಇವುಗಳ ಮಧ್ಯೆ ವಿದ್ಯುನ್ಮಾನ, ಮುದ್ರಣ ಮಾಧ್ಯಮಗಳು ಹಳೆಯ ಸುದ್ದಿಗಳನ್ನು ಬಿತ್ತರಿಸುವಂತಾಗಿದೆ ಎಂದು ಅವರು ವಿವರಿಸಿದರು.

ಪತ್ರಕರ್ತನಿಗೆ ತನ್ನ ತಪ್ಪುಗಳನ್ನು ಅರಿಯುವ, ತಿದ್ದಿಕೊಳ್ಳುವ ಹಾಗೂ ಆತನ ಮಿತಿ  ತಿಳಿದಿರಬೇಕು. ಆದರೆ, ಇಂದು ಪತ್ರಕರ್ತರದ್ದು ಒತ್ತಡದ ಜೀವನವಾಗಿದೆ. ಸದಾ ಉದ್ಯೋಗದಲ್ಲಿ ಅಭದ್ರತೆ, ಕೆಲಸಕ್ಕೆ ತಕ್ಕ ಸೂಕ್ತ ವೇತನ ದೊರೆಯದಿರುವುದು ಸೇರಿದಂತೆ ಅನೇಕ ಗೊಂದಲಗಳ ನಡುವೆ ಬದುಕುವಂತಾಗಿರುವುದು ವಿಪರ್ಯಾಸ ಎಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತರಾದ ರವಿ ಆರುಂಡಿ, ಪ್ರಕಾಶ್ ಕುಗ್ವೆ, ಸಿ. ವರದಾರಾಜ್, ತೇಜಸ್ವಿನಿ ಪ್ರಕಾಶ್ ಹಾಗೂ ರಾಮ್‍ಪ್ರಸಾದ್ ಗಾಂಧಿ ಅವರಿಗೆ ಮಾದ್ಯಮ ಪ್ರಶಸ್ತಿ ನೀಡಲಾಯಿತು.

ಬಸವರಾಜ್ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಬಿ.ಪಿ. ಹರೀಶ್, ರೈತ ಮುಖಂಡ ತೇಜಸ್ವಿ ಪಟೇಲ್, ರೇಷ್ಮೆ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಡಿ. ಬಸವರಾಜ್ ಮತ್ತಿತರರಿದ್ದರು. ಬಿ.ಬಿ. ಮಲ್ಲೇಶ್ ಪ್ರಾಸ್ಥಾವಿಕ ಮಾತನಾಡಿದರು. ಸದಾನಂದ ಹೆಗಡೆ ಸ್ವಾಗತಿಸಿದರು. ದೇವಿಕಾ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X