ಹೆಬ್ರಿ: ಕಲ್ಯಾಣ್ ಜ್ಯುವೆಲ್ಲರ್ಸ್ ಮಿನಿ ಸ್ಟೋರ್ ನಲ್ಲಿ ಕಳವು
ಹೆಬ್ರಿ, ಅ. 16: ಇಲ್ಲಿನ ಸಂತೆ ಮಾರ್ಕೆಟ್ ಬಳಿ ಇರುವ ಕಲ್ಯಾಣ್ ಜ್ಯುವೆಲ್ಲರ್ಸ್ ನ ಮಿನಿ ಸ್ಟೋರ್ ನಲ್ಲಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ.
ರವಿವಾರ ರಾತ್ರಿ ಮಿನಿ ಸ್ಟೋರ್ ಗೆ ನುಗ್ಗಿದ ಕಳ್ಳರು ಸುಮಾರು 27 ಸಾವಿರ ರೂ. ನಗದು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story