Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಬಾಂಗ್ಲಾ ವಲಸಿಗರ ವಿರುದ್ಧ ಕ್ರಮಕ್ಕೆ...

​ಬಾಂಗ್ಲಾ ವಲಸಿಗರ ವಿರುದ್ಧ ಕ್ರಮಕ್ಕೆ ಕಡಗದಾಳು ಗ್ರಾ.ಪಂ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Oct 2017 6:19 PM IST
share
​ಬಾಂಗ್ಲಾ ವಲಸಿಗರ ವಿರುದ್ಧ ಕ್ರಮಕ್ಕೆ ಕಡಗದಾಳು ಗ್ರಾ.ಪಂ ಆಗ್ರಹ

ಮಡಿಕೇರಿ, ಅ.16:ಕಾರ್ಮಿಕರ ಸೋಗಿನಲ್ಲಿ ಕೊಡಗು ಜಿಲ್ಲೆಯನ್ನು ಪ್ರವೇಶಿಸಿರುವ ಬಾಂಗ್ಲಾ ವಲಸಿಗರ ಬಗ್ಗೆ ತೋಟದ ಮಾಲೀಕರು ಎಚ್ಚತ್ತುಕೊಳ್ಳಬೇಕೆಂದು ಕರೆ ನೀಡಿರುವ ಕಡಗದಾಳು ಗ್ರಾ.ಪಂ ಉಪಾಧ್ಯಕ್ಷರಾದ ಮಾದೇಟಿರ ತಿಮ್ಮಯ್ಯ, ಕಾನೂನು ಬಾಹಿರವಾಗಿ ನೆಲೆ ನಿಂತಿರುವ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪಂಚಾಯಿತಿ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಸ್ವಾರ್ಥಕ್ಕಾಗಿ ಕೆಲವು ತೋಟದ ಮಾಲೀಕರು ಬಾಂಗ್ಲಾ ವಲಸಿಗರಿಗೆ ಆಶ್ರಯ ಮತ್ತು ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಡಗದಾಳು ಪಂಚಾಯಿತಿ ವಲಸಿಗರ ಬಗ್ಗೆ ಜಾಗೃತಗೊಂಡಿದ್ದು, ವಲಸಿಗರಿಗೆ ರಕ್ಷಣೆ ನೀಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿದೆ ಎಂದರು.  ಕಾಫಿ ತೋಟ ಕಾರ್ಮಿಕರ ಸೋಗಿನಲ್ಲ್ಲಿ ಬಂದು ಸೇರಿಕೊಳ್ಳುತ್ತಿರುವ ಬಾಂಗ್ಲಾ ದೇಶಿಗರು ನಂತರದ ದಿನಗಳಲ್ಲಿ ಸ್ಥಳೀಯ ಜನರ ಸಂಪರ್ಕ ಬೆಳಸಿಕೊಂಡು ಆಧಾರ್ ಕಾರ್ಡ್ ಸೇರಿದಂತೆ ಮೂಲ ದಾಖಲಾತಿಗಳನ್ನು ಅಕ್ರಮವಾಗಿ ಪಡೆದು ಭಾರತ ದೇಶದಲ್ಲೇ ಶಾಶ್ವತವಾಗಿ ನೆಲೆಯೂರುವ ಹುನ್ನಾರ ತೆರೆಮರೆಯಲ್ಲಿ ಸದ್ದಿಲ್ಲದೆ ನಡೆಯುತ್ತಿದೆ. ಇದಕ್ಕೆ ಸ್ಥಳೀಯ ಕೆಲವು ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸಹಕಾರ ನೀಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಮ್ಮಯ್ಯ ಆರೋಪಿಸಿದರು. 
 ಅಕ್ರಮ ವಲಸಿಗರಿಂದ ಮುಂದೊಂದು ದಿನ ಜಿಲ್ಲೆಗೆ ಅಪಾಯ ಕಾದಿದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು ಇದೇ ಕಾರಣಕ್ಕೆ ಕಡಗದಾಳು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಅ.11 ರಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಕಠಿಣ ಕ್ರಮದ ನಿರ್ಧಾರ ಕೈಗೊಂಡಿದೆ ಎಂದರು.

ಅಸ್ಸಾಂ ರಾಜ್ಯದವರೆಂದು ಹೇಳಿಕೊಂಡು ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಕಾಫಿ ತೋಟಗಳಲ್ಲಿ ಈಗಾಗಲೇ ಬಾಂಗ್ಲಾ ದೇಶದ ಅಕ್ರಮ ವಲಸಿಗರು ನೆಲೆಸಿದ್ದಾರೆ. ಮುಂದಿನ ದಿನಗಳಲ್ಲಿ ಇವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು, ಪಂಚಾಯಿತಿ ನಿರ್ಧಾರಕ್ಕೆ ತೋಟದ ಮಾಲೀಕರು ಹಾಗೂ ಗ್ರಾಮಸ್ಥರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕಡಗದಾಳು ಮಾತ್ರವಲ್ಲದೆ ಜಿಲ್ಲೆಯ ಹಲವಾರು ತೋಟಗಳಲ್ಲಿ ಅಕ್ರಮ ವಲಸಿಗರು ಬಂದು ನೆಲೆಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಜಿ.ಪಂ, ಮೂರು ತಾ.ಪಂ ಹಾಗೂ ಜಿಲ್ಲೆಯ ಶಾಸಕರುಗಳು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದರು.

ಕಡಗದಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ತೋಟಗಳಲ್ಲಿ ನೆಲೆಸಿರುವ ಬಾಂಗ್ಲಾ ದೇಶಿ ಅಕ್ರಮ ವಲಸಿಗರ ಬಗ್ಗೆ ಪಂಚಾಯಿತಿ ಕಛೇರಿಗೆ ಮಾಹಿತಿ ನೀಡುವಂತೆ ಸೂಚಿಸಿ ತೋಟದ ಮಾಲೀಕರಿಗೆ ತಿಳುವಳಿಕೆ ಪತ್ರ ನೀಡಲಾಗಿದೆ. ದಾಖಲಾತಿಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ಮೂಲಕ ಪರಿಶೀಲಿಸಿ ಭಾರತೀಯರೆ ಅಥವಾ ವಲಸಿಗರೆ ಎಂದು ಖಾತ್ರಿ ಪಡಿಸಿಕೊಂಡು ಕ್ರಮಕ್ಕೆ ಮುಂದಾಗುವುದಾಗಿ ತಿಮ್ಮಯ್ಯ ಹೇಳಿದರು.  ತೋಟದ ಮಾಲೀಕರು ಮಾಹಿತಿ ನೀಡದೆ ತಮ್ಮ ಲಾಭಕ್ಕೆ ಈ ಅಕ್ರಮ ವಲಸಿಗರನ್ನು ರಕ್ಷಿಸಲು ಮುಂದಾದಲ್ಲಿ ಪಂಚಾಯತ್ ಕ್ರಿಮಿನಲ್ ಮೊಕ್ಕದ್ದಮೆಯನ್ನು ಹೂಡಲಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕಡಗದಾಳು ಗ್ರಾ.ಪಂ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಹಾಗೂ ಕೇಂದ್ರ ಸರಕಾರದ ಬಳಿ ಮನವಿ ಮಾಡಲಿದೆ. ನಕಲಿ ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ದಂಧೆ ವಿರುದ್ಧವೂ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ತಿಮ್ಮಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ ಸದಸ್ಯರುಗಳಾದ ಪೊನ್ನಚೆಟ್ಟಿರ ರಮೇಶ್, ರಮೇಶ್ ರೈ, ರಮೇಶ್ ಆಚಾರ್ಯ ಹಾಗೂ ಪುಷ್ಪಾವತಿ ರೈ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X