Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತ್ಯೇಕ ಕಾರ್ಮಿಕ ಮಂಡಳಿ ರಚಿಸಲು ಆಗ್ರಹ

ಪ್ರತ್ಯೇಕ ಕಾರ್ಮಿಕ ಮಂಡಳಿ ರಚಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Oct 2017 5:47 PM IST
share

ಬೆಂಗಳೂರು, ಅ. 17: ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಸಮರ್ಪಕ ತಲುಪಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಬೇರ್ಪಡಿಸಿ ಪ್ರತ್ಯೇಕ ಮಂಡಳಿ ರಚಿಸಬೇಕು ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವೆಲ್‌ಫೇರ್ ಅಸೋಸಿಯೇಶನ್ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಕಾರ್ಮಿಕ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಮಂಡಳಿಯ ಅಧಿಕಾರಿಗಳಲ್ಲದ ಕಾರಣ ಕಾರ್ಮಿಕ ಇಲಾಖೆಯ ಕೆಲಸಗಳನ್ನು ಹಾಗೂ ಮಂಡಳಿ ಕೆಲಸಗಳನ್ನು ನಿಭಾಯಿಸಲು ಕಷ್ಟವಾಗುತ್ತಿದೆ. ಹೀಗಾಗಿ, ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕ ಸಿಗಬೇಕಾದ ಸೌಲಭ್ಯಗಳು ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಆದುದರಿಂದ ಮಂಡಳಿಯನ್ನು ಬೇರ್ಪಡಿಸಿ, ಪ್ರತ್ಯೇಕ ಮಂಡಳಿ ರಚಿಸಬೇಕು ಎಂದರು.

ಕಟ್ಟಡ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೀಡುತ್ತಿರುವ ಧನ ಸಹಾಯಕ್ಕೆ ತಿದ್ದುಪಡಿ ಮಾಡಿರುವುದು ಸರಿಯಲ್ಲ. 1 ನೆ ತರಗತಿಯಿಂದ 4 ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೂ ಧನ ಸಹಾಯ ನೀಡಬೇಕು. ಐಟಿಐ ಪ್ರೊಫೆಷನ್ ಡಿಪ್ಲೊಮೋ ವ್ಯಾಸಂಗಕ್ಕೆ 20 ಸಾವಿರ ಸಹಾಯ ಧನ ನೀಡಬೇಕು. ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವ್ಯಾಸಂಗಕ್ಕೆ 1 ಲಕ್ಷ ರೂ. ನೀಡಬೇಕು. ಕಟ್ಟಡ ಕಾರ್ಮಿಕರು ಮೃತಪಟ್ಟರೆ ಕೇವಲ 54 ಸಾವಿರ ರೂ.ನೀಡಲಾಗುತ್ತಿದೆ. ಅದನ್ನು ಐದು ಲಕ್ಷಕ್ಕೆ ಏರಿಕೆ ಮಾಡಬೇಕು ಎಂದು ಹೇಳಿದರು.

ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರು ಸ್ಲಂಗಳಲ್ಲಿ ಗುಡಿಸಲುಗಳಲ್ಲಿ, ಬಾಡಿಗೆ ಮನೆಗಳಲ್ಲಿ, ಶೌಚಾಲಯಗಳಲ್ಲಿ ವಾಸ ಮಾಡುವಂತ ಸ್ಥಿತಿ ಇದೆ. ಆದರೆ, ಸರಕಾರ ಸೂರು ಕಲ್ಪಿಸುವಲ್ಲಿ ವಿಫಲವಾಗಿದೆ ಎಂದ ಅವರು, ಕೂಡಲೇ ಮಂಡಳಿಯಿಂದ ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡಬೇಕು ಮತ್ತು ಕಾರ್ಮಿಕ ಕಾಲನಿಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಮಹಾತ್ಮಗಾಂಧಿ ನರೇಗಾದಲ್ಲಿ ಕೆಲಸ ಮಾಡುವವರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೋಂದಣಿ ಮಾಡಿ ಸದಸ್ಯರನ್ನಾಗಿ ನೇಮಕ ಮಾಡುತ್ತಿರುವುದು ಸರಿಯಲ್ಲ. ಅದೇ ರೀತಿಯಲ್ಲಿ ಕಾರ್ಮಿಕರ ಹಣವನ್ನು ವೆಚ್ಚ ಮಾಡಿ ಬಸ್ ಪಾಸ್ ವಿತರಿಸಲು ಮುಂದಾಗಿರುವುದನ್ನು ಸಂಘ ವಿರೋಧಿಸುತ್ತದೆ ಎಂದರು.

ಕಾರ್ಮಿಕರ ತರಬೇತಿ ಕಾರ್ಯಕ್ರಮದಲ್ಲಿ ಅನಗತ್ಯವಾಗಿ ಹಣ ಬಳಕೆ ಮಾಡಿರುವುದನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಕುರಿತು ಜೂ.22 ರಂದು ನಡೆದ ಮಂಡಳಿ ಸಭೆಯಲ್ಲಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಗೌಸ್‌ ಪೀರ್, ಖಜಾಂಚಿ ಡಿ.ಈಶ್ವರಪ್ಪ, ರಂಗರಾಜ್, ಬುಡೇನ್‌ಸಾಬ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X