ಮರೋಳಿ: ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ
ಮಂಗಳೂರು, ಅ.18: ಮನಪಾ ವ್ಯಾಪ್ತಿಯ 37ನೆ ಮರೋಳಿ ವಾರ್ಡ್ನ 47ನೆ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯ ಕ್ರಮಕ್ಕೆ ಶಾಸಕ ಜೆ.ಆರ್.ಲೋಬೊ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪಕ್ಷದ ಸಾಧನೆಯ ಬಗ್ಗೆ ಕಾರ್ಯಕರ್ತರು ಶ್ರದ್ಧೆಯಿಂದ ಕೆಲಸ ಮಾಡುವಂತೆ ಕರೆ ನೀಡಿದರಲ್ಲದೆ ಕೇಂದ್ರದ ಬಿಜೆಪಿ ಸರಕಾರದ ವೈಫಲ್ಯತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡಿದರು.
Next Story