ಮಂಗಳೂರು, ಅ.18: ಮಲ್ಲೂರು ಸಮೀಪದ ಉಳಾಯಿಬೆಟ್ಟು ನಿವಾಸಿ ಪಿ.ಮುಹಮ್ಮದ್ (58) ಬುಧವಾರ ಸ್ವಗೃಹದಲ್ಲಿ ನಿಧನರಾದರು.
ಉಳಾಯಿಬೆಟ್ಟು ಗ್ರಾಪಂ ಮಾಜಿ ಸದಸ್ಯರಾಗಿದ್ದ ಇವರು ಉಳಾಯಿಬೆಟ್ಟು ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಮೂವರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.