ಪಟಾಕಿ ಅವಘಡ...
ಬೆಳಕಿನ ಹಬ್ಬ ದೀಪಾವಳಿಯಂದು ಪಟಾಕಿ ಹಚ್ಚಲು ಹೋಗಿ ಬೆಂಗಳೂರಿನ ವಿವಿಧೆಡೆ 20ಕ್ಕೂ ಹೆಚ್ಚು ಜನರು ಕಣ್ಣಿಗೆ ಹಾನಿಯನ್ನು ಮಾಡಿಕೊಂಡಿದ್ದಾರೆ. ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮತ್ತಿಬ್ಬರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಇವರಲ್ಲಿ ಎಂಟು ವರ್ಷದ ಬಾಲಕನೊಬ್ಬ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನಾರಾಯಣ ನೇತ್ರಾಲಯದ ಎಲ್ಲ ಶಾಖೆಗಳಿಂದ 11 ಮಂದಿ, ಜಯನಗರದ ನೇತ್ರಧಾಮದಲ್ಲಿ ಇಬ್ಬರು, ವಿಜಯ ನೇತ್ರಾಲಯದಲ್ಲಿ ಮೂವರು, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ನಗರದ ನಾನಾ ಕಣ್ಣಿನ ಆಸ್ಪತ್ರೆಗಳಲ್ಲಿ ಪಟಾಕಿಯಿಂದಾದ ಗಾಯಗಳಿಗೆ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಮಾಹಿತಿ ದೊರೆತಿದೆ.
Next Story





