ಬಂಟ್ವಾಳ : ಕೋಳಿ ಅಂಕಕ್ಕೆ ಪೊಲೀಸರ ದಾಳಿ - ಆರು ಮಂದಿ ವಶಕ್ಕೆ
ಬಂಟ್ವಾಳ, ಅ. 20: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಸೋಣಂದೂರು ಕರಿಯಬೆ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ತಂಗಡಿ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದಾರೆ.
10 ಕೋಳಿಗಳು ಹಾಗೂ ಕೋಳಿ ಅಂಕನಿರತ ಆರು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಗೂ ಸಿಬಂದಿ ದಾಳಿಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story