Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾದ ಐದು ಜಿಲ್ಲೆಗಳಲ್ಲಿ...

ಒಡಿಶಾದ ಐದು ಜಿಲ್ಲೆಗಳಲ್ಲಿ ಮಾವೋವಾದಿಗಳಿಂದ ಬಂದ್

ಜನಜೀವನ ಅಸ್ತವ್ಯಸ್ತ, ವ್ಯಕ್ತಿಯ ಹತ್ಯೆ, ಮಹಿಳೆಯ ಅಪಹರಣ

ವಾರ್ತಾಭಾರತಿವಾರ್ತಾಭಾರತಿ21 Oct 2017 7:20 PM IST
share
ಒಡಿಶಾದ ಐದು ಜಿಲ್ಲೆಗಳಲ್ಲಿ ಮಾವೋವಾದಿಗಳಿಂದ ಬಂದ್

ಭುವನೇಶ್ವರ,ಅ.21: ಒಡಿಶಾದ ಐದು ಜಿಲ್ಲೆಗಳಲ್ಲಿ ಮಾವೋವಾದಿಗಳಿಂದ 12 ಗಂಟೆಗಳ ಬಂದ್ ಕರೆಯ ಪರಿಣಾಮ ಶನಿವಾರ ಸಾಮಾನ್ಯ ಜನಜೀವನ ಅಸ್ತವ್ಯಸ್ತ ಗೊಂಡಿತ್ತು. ಇದೇ ವೇಳೆ ಬಂಡುಕೋರರು ಕಂಧಮಾಲ್ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯನ್ನು ಕೊಂದಿದ್ದಾರೆ ಹಾಗೂ ಓರ್ವ ಮಹಿಳೆಯನ್ನು ಅಪಹರಿಸಿದ್ದಾರೆ.

 ಕೋರಾಪತ್ ಜಿಲ್ಲೆಯ ಕುಂಡುಲಿ ಗ್ರಾಮದಲ್ಲಿ ಅ.10ರಂದು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಆರೋಪಿಗಳ ತಕ್ಷಣ ಬಂಧನ, ಬುಡಕಟ್ಟು ಮಹಿಳೆಯರ ವಿರುದ್ಧ ಹಿಂಸೆಗೆ ಅಂತ್ಯ ಮತ್ತು ಮಹಾನದಿ ಜಲ ವಿವಾದಕ್ಕೆ ಪರಿಹಾರ ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಿಪಿಐ(ಮಾವೋವಾದಿ)ನ ಬನ್ಸ್‌ಧಾರಾ-ಘುಮುಸುರಾ-ನಾಗಬಲಿ ವಿಭಾಗವು ಈ ಬಂದ್‌ಗೆ ಕರೆ ನೀಡಿತ್ತು.

ಶಾಂತಿಯನ್ನು ಕಾಯ್ದುಕೊಳ್ಳಲು ಸೂಕ್ಷ್ಮಸ್ಥಳಗಳಲ್ಲಿ ಅರೆ ಸೇನಾಪಡೆಗಳು ಮತ್ತು ಪೊಲೀಸರನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಿತ್ತಲಾಗಿದ್ದರೂ ರಾಯಗಡ, ಕಂಧಮಾಲ್, ಗಜಪತಿ, ಕಾಳಹಂದಿ ಮತ್ತು ಗಂಜಾಂ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದರು.

ಈ ಐದು ಜಿಲ್ಲೆಗಳಲ್ಲಿ ಸರಕಾರಿ ಬಸ್‌ಗಳು ರಸ್ತೆಗಿಳಿದಿರಲಿಲ್ಲ. ನಗರ ಪ್ರದೇಶಗಳಲ್ಲಿ ಖಾಸಗಿ ವಾಹನಗಳು ಸಂಚರಿಸುತ್ತಿದ್ದವು. ಶಾಲಾ-ಕಾಲೇಜುಗಳು ಮತ್ತು ಅಂಗಡಿ- ಮುಂಗಟ್ಟುಗಳನ್ನು ಮುಚ್ಚಲಾಗಿತ್ತು ಎಂದರು.

ಬಂಡುಕೋರರು ಕಂಧಮಾಲ್ ಜಿಲ್ಲೆಯಲ್ಲಿ ಹಲವೆಡೆ ರಾಷ್ಟ್ರೀಯ ಹೆದ್ದಾರಿ 59ರಲ್ಲಿ ತಡೆಗಳನ್ನೊಡ್ಡಿದ್ದರು.

ಇದೇ ವೇಳೆ ಕಂಧಮಾಲ್-ಕಾಳಹಂದಿ ಗಡಿಯಲ್ಲಿ ಮಾವೋವಾದಿಗಳಿಂದ ಕೊಲೆಯಾಗಿದ್ದಾನೆ ಎನ್ನಲಾಗಿರುವ ವ್ಯಕ್ತಿಯೋರ್ವನ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸಶಸ್ತ್ರ ಬಂಡುಕೋರರ ಗುಂಪೊಂದು ನಸುಕಿನ ಒಂದು ಗಂಟೆಯ ಸುಮಾರಿಗೆ ಗ್ರಾಮಕ್ಕೆ ನುಗ್ಗಿ ಮೋಹನ ಮಝಿ ಎಂಬ ಈ ವ್ಯಕ್ತಿಯನ್ನು ಆತನ ಮನೆಯಿಂದ ಎಳದೊಯ್ದಿದ್ದರು ಮತ್ತು ಇಂದು ಬೆಳಿಗ್ಗೆ ಆತನನ್ನು ಕೊಂದಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.

ಕಂಧಮಾಲ್ ಜಿಲ್ಲೆಯ ಲಾಹಿದಿ ಗ್ರಾಮದ ಮಹಿಳೆಯೋರ್ವಳನ್ನು ಪೊಲೀಸ್ ಮಾಹಿತಿದಾರಳೆಂದು ಶಂಕಿಸಿ ನಕ್ಸಲರು ಅಪಹರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X