Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಜ್ರ ಮಹೋತ್ಸವಕ್ಕೆ 10 ಕೋಟಿ ರೂ....

ವಜ್ರ ಮಹೋತ್ಸವಕ್ಕೆ 10 ಕೋಟಿ ರೂ. ಅಗತ್ಯವಿಲ್ಲ: ಮಾಜಿ ಶಾಸಕರ ವೇದಿಕೆ

ವಾರ್ತಾಭಾರತಿವಾರ್ತಾಭಾರತಿ21 Oct 2017 7:21 PM IST
share

ಬೆಂಗಳೂರು, ಅ.21: ವಿಧಾನ ಸೌಧದ ವಜ್ರಮಹೋತ್ಸವ ಸಮಾರಂಭಕ್ಕೆ 10 ಕೋಟಿ ರೂ. ಖರ್ಚು ಮಾಡುವ ಅಗತ್ಯವಿಲ್ಲ. ಹೀಗಾಗಿ, ರಾಜ್ಯ ಸರಕಾರ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸರಳವಾಗಿ ಸಮಾರಂಭ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಜಿ ಶಾಸಕರ ವೇದಿಕೆ ಆಗ್ರಹಿಸಿದೆ.

ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಚ್.ಡಿ.ಬಸವರಾಜು, ವಿಧಾನಸಭೆಯ ಅಧ್ಯಕ್ಷ ಕೆ.ಬಿ.ಕೋಳವಾಡ ಹಾಗೂ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ 28 ಕೋಟಿ ರೂ. ವೆಚ್ಚದಲ್ಲಿ ವಿಧಾನಸೌಧ ವಜ್ರಮಹೋತ್ಸವ ಆಚರಣೆಗೆ ಮುಂದಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು 10 ಕೋಟಿ ರೂ.ಗೆ ಕಡಿತಗೊಳಿಸಿದ್ದಾರೆ. ಇದು ಸ್ವಾಗತಾರ್ಹ. ಆದರೆ, ಕೋಟಿ ಕೋಟಿ ರೂ. ಖರ್ಚು ಮಾಡಿ ವಜ್ರಮಹೋತ್ಸವ ಆಚರಿಸುವ ಅಗತ್ಯವಾದರೂ ಏನಿದೆ? ಈ ಹಿಂದೆ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರನ್ನು ಕರೆಸಿ ಸರಳವಾಗಿ ಕಾರ್ಯಕ್ರಮ ಮಾಡಿರುವ ನಿದರ್ಶನವಿದೆ. ಹೀಗಿರುವಾಗ ಕೋಟ್ಯಂತರ ರೂ. ದುಂದು ವೆಚ್ಚದ ಅಗತ್ಯವೇನು? ಕೆ.ಬಿ.ಕೋಳಿವಾಡ ಮತ್ತು ಡಿ.ಎಚ್.ಶಂಕರಮೂರ್ತಿ ಅವರು ಇದಕ್ಕೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಕಡಿಮೆ ವೆಚ್ಚದಲ್ಲಿ ಜನಮೆಚ್ಚುವ ರೀತಿ ಅರ್ಥಪೂರ್ಣ ಸಮಾರಂಭ ಮಾಡಲು ಹಲವು ಅವಕಾಶಗಳಿವೆ. ಹಲವು ಮಾಜಿ ಶಾಸಕರು ಇಂದಿಗೂ ಜೀವಂತವಾಗಿದ್ದಾರೆ. ವಿಧಾನಸೌಧದ 60 ವರ್ಷಗಳ ಇತಿಹಾಸದಲ್ಲಿ ಸಭಾಪತಿ, ಸಭಾಧ್ಯಕ್ಷರಾಗಿದ್ದವರ ಪೈಕಿ ಹಲವರು ಬದುಕಿದ್ದಾರೆ. ಅಂತವರನ್ನು ಕರೆಸಿ ಗೌರವಿಸಿ, ಚರ್ಚಾಕೂಟಗಳನ್ನು ನಡೆಸಬಹುದು. ವಿಧಾನಸೌಧದಲ್ಲಿ ಮಂಡನೆಯಾದ ಅತ್ಯುತ್ತಮ ಮಸೂದೆಗಳ ಬಗ್ಗೆ ಚರ್ಚಿಸಬಹುದು. ಆದರೆ, ಸಭಾಪತಿ ಮತ್ತು ಸಭಾಧ್ಯಕ್ಷರ ಏಕಮುಖ ತೀರ್ಮಾನದಿಂದ ವೈಭವದ ಕಾರ್ಯಕ್ರಮ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.

10 ಲಕ್ಷ ಸಾಕು: ವೇದಿಕೆ ಕಾರ್ಯದರ್ಶಿ ಬಿ.ವಿ.ರಾಮಚಂದ್ರರೆಡ್ಡಿ ಮಾತನಾಡಿ, ವ್ಯಕ್ತಿ 60 ವರ್ಷ ಪೂರೈಸಿದರೆ ಷಷ್ಠಿಪೂರ್ತಿ ಮಾಡುವುದು ಸಂಪ್ರದಾಯ. ವಿಧಾನಸೌಧ ಕಟ್ಟಡಕ್ಕೆ 60 ವರ್ಷ ತುಂಬಿದಕ್ಕೆ ವಜ್ರಮಹೋತ್ಸವ ಮಾಡಲಾಗುತ್ತಿದೆ. ಮೌಢ್ಯದ ವಿರುದ್ಧ ಇರುವ ಸರಕಾರ ಈ ಕಾರ್ಯಕ್ರಮಕ್ಕೆ ಕೈ ಹಾಕಿದೆ. 10 ಲಕ್ಷದಲ್ಲಿ ಮಾಡಬಹುದಾದ ಕಾರ್ಯಕ್ರಮಕ್ಕೆ 10 ಕೋಟಿ ರೂ. ಖುರ್ಚು ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದ ಅವರು, ಬೆಂಗಳೂರು ನಗರದಲ್ಲಿ ಗುಂಡಿ ಮುಚ್ಚಲು ಸಾಧ್ಯವಾಗಿಲ್ಲ. ಸತತ ನಾಲ್ಕು ವರ್ಷಗಳ ಬರದಿಂದ ರಾಜ್ಯದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಅದ್ಧೂರಿ ಕಾರ್ಯಕ್ರಮ ಬೇಕೇ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿ-ಗಣ್ಯರಿಗೆ ಪಂಚತಾರಾ ಹೊಟೇಲ್ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಸರಕಾರವೇ ಜಾರಿಗೆ ತಂದಿರುವ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್ ಊಟದ ವ್ಯವಸ್ಥೆ ಮಾಡಬಹುದು. ಪ್ರತಿಕ್ಷೇತ್ರದಲ್ಲಿ ಅಲ್ಲಿನ ಶಾಸಕರು 60 ಸಸಿ ನೆಡಲು ಅವಕಾಶ ನೀಡಬಹುದು. ಹೀಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕಡಿಮೆ ವೆಚ್ಚದಲ್ಲಿ ವಜ್ರಮಹೋತ್ಸವನ್ನು ಸ್ಮರಣೀಯವಾಗಿಸಲು ಮುಂದಾಗಬೆೀಕು ಎಂದು ಅವರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X