ಈಜಲು ಹೋಗಿ ವ್ಯಕ್ತಿ ಮೃತ್ಯು
ಬೆಂಗಳೂರು, ಅ.21: ತೆರೆದ ಬಾವಿಯಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಯಾದಗಿರಿ ಜಿಲ್ಲಾಯ ಹನುಮಂತಪ್ಪ(50) ಮೃತಪಟ್ಟವರೆಂದು ಪೊಲೀಸರು ಗುರುತಿಸಿದ್ದಾರೆ.
ಗಾರೆ ಕೆಲಸ ಮಾಡುತ್ತಿದ್ದ ಈತ ಚಿಕ್ಕೇನಹಳ್ಳಿಯಲ್ಲಿ ವಾಸವಿದ್ದ. ಶುಕ್ರವಾರ ಮಧ್ಯಾಹ್ನ ಚಿಕ್ಕೇನಹಳ್ಳಿ ಮುಖ್ಯರಸ್ತೆಯಲ್ಲಿರುವ ತೆರೆದ ಬಾವಿಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ.
ಈ ಸಂಬಂಧ ಬಾಗಲೂರು ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
Next Story





