Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಾವುದೇ ತನಿಖೆ-ಬಹಿರಂಗ ಚರ್ಚೆಗೂ ಸಿದ್ಧ

ಯಾವುದೇ ತನಿಖೆ-ಬಹಿರಂಗ ಚರ್ಚೆಗೂ ಸಿದ್ಧ

ಬಿಎಸ್‌ವೈಗೆ ಡಿ.ಕೆ.ಶಿವಕುಮಾರ್ ಸವಾಲು

ವಾರ್ತಾಭಾರತಿವಾರ್ತಾಭಾರತಿ21 Oct 2017 7:47 PM IST
share
ಯಾವುದೇ ತನಿಖೆ-ಬಹಿರಂಗ ಚರ್ಚೆಗೂ ಸಿದ್ಧ

ಬೆಂಗಳೂರು, ಅ. 21: ಕಲ್ಲಿದ್ದಲು ಗುತ್ತಿಗೆಯ ದಂಡ ಪಾವತಿಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ  ಅವರು ಸಿಬಿಐ ತನಿಖೆಗೆ ಆಗ್ರಹಿಸಿ ಪತ್ರ ಬರೆದರೆ ಸ್ವಾಗತ. ಈ ಸಂಬಂಧ ಯಾವುದೇ ತನಿಖೆ ಮತ್ತು ಬಹಿರಂಗ ಚರ್ಚೆಗೂ ತಾನು ಸಿದ್ಧ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಶನಿವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಳ ಒಪ್ಪಂದ ಮಾಡಿಕೊಳ್ಳುವ ಅನುಭವ ಯಡಿಯೂರಪ್ಪ ಮತ್ತು ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ನಮಗೆ ಆ ಅಭ್ಯಾಸವಿಲ್ಲ. ಕೇಂದ್ರ ಸರಕಾರದ ನೀತಿ- ನಿಯಮಗಳ ಅನುಸಾರವಾಗಿಯೇ ಒಪ್ಪಂದಗಳಾಗಿದ್ದವು ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಇಂಥ ಬೇಜವಾಬ್ದಾರಿ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನಿಂದ ಕರ್ನಾಟಕಕ್ಕೆ ಹಂಚಿಕೆಯಾಗಿದ್ದ ಕಲ್ಲಿದ್ದಲು ಬ್ಲಾಕ್ ರದ್ದಾಯಿತು. ನಮ್ಮ ಎಲ್ಲ ಸಂಸತ್ ಸದಸ್ಯರು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಕಲ್ಲಿದ್ದಲು ಬ್ಲಾಕ್ ಹಂಚಿಕೆಗೆ ಕೋರಿದ್ದೇವೆ. ಆದರೆ, ಹಂಚಿಕೆಗೆ ಅರ್ಹತೆ ಸಿಗಬೇಕೆಂಬ ಉದ್ದೇಶದಿಂದ ಕೆಇಸಿಎಂಎಲ್‌ಗೆ ಹಣ ಪಾವತಿ ಮಾಡಿದ್ದೆವು ಎಂದರು.

ಪ್ರತೀ ವರ್ಷ ನಾವು ಜಾಸ್ತಿ ಹಣ ನೀಡಿ ಕೇಂದ್ರ ಸರಕಾರ ಕಂಪೆನಿಗಳಿಂದ ಕಲ್ಲಿದ್ದಲು ಖರೀದಿ ಮಾಡುತ್ತಿದ್ದೇವೆ. ಇದರಿಂದ ಕೋಟ್ಯಂತರ ರೂ. ಸರಕಾರಕ್ಕೆ ನಷ್ಟ ಆಗುತ್ತಿದೆ. ಹೀಗಾಗಿ ರಾಜ್ಯದ ಹಿತ ಕಾಪಾಡಲು, ನಷ್ಟ ಭರಿಸಲು ಕಂಪೆನಿಗೆ ಹಣ ಪಾವತಿ ಮಾಡಿದ್ದೇವೆ. ಇದು ಕೇಂದ್ರ ಸರಕಾರಕ್ಕೂ ಗೊತ್ತಿದೆ ಎಂದು ಹೇಳಿದರು.

ಬಿಎಸ್‌ವೈ ಅವರಿಗೆ ಸತ್ಯ ಏನೆಂದು ಗೊತ್ತಿಲ್ಲ. ಹೀಗಾಗಿ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇದರಲ್ಲಿ ಯಾವುದೇ ವೈಯಕ್ತಿಕ ತೀರ್ಮಾನ ಆಗಿಲ್ಲ. ಸಿಎಂ ಸಿದ್ದರಾಮಯ್ಯ ಅಥವಾ ನನಗಾಗಲಿ ಯಾವುದೇ ದುರುದ್ದೇಶವಿಲ್ಲ ಎಂದ ಅವರು, ಬಿಎಸ್‌ವೈ ಇಂತಹ ಆರೋಪಗಳನ್ನು ಮಾಡಿ ನಗೆಪಾಟಲಿಗೆ ಈಡಾಗುತ್ತಿರುವುದನ್ನು ನೋಡಿ ನನಗೆ ವ್ಯಥೆಯಾಗುತ್ತಿದೆ ಎಂದು ಲೇವಡಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X