Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅ.23 ರಂದು ರಾಜ್ಯ ಸರಕಾರದಿಂದ ಕಿತ್ತೂರು...

ಅ.23 ರಂದು ರಾಜ್ಯ ಸರಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ

ವಾರ್ತಾಭಾರತಿವಾರ್ತಾಭಾರತಿ21 Oct 2017 7:53 PM IST
share

ಬೆಂಗಳೂರು, ಅ.21: ಸರಕಾರದ ವತಿಯಿಂದ ಇದೇ ಮೊದಲ ಭಾರಿಗೆ ರಾಜ್ಯಮಟ್ಟದಲ್ಲಿ ಸ್ವಾತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವ ಹಾಗೂ ವಿಜಯೋತ್ಸವ ಕಾರ್ಯಕ್ರಮವನ್ನು ಅ.23 ರಂದು ವಿಧಾನ ಸೌಧದ ಮುಂಭಾಗ ಆಚರಿಸಲಾಗುವುದು ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಮಹಾಸ್ವಾಮಿ ತಿಳಿಸಿದ್ದಾರೆ.

ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ 25 ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇರುವುದರಿಂದ ವಿಧಾನಸೌಧದ ಮುಂಭಾಗ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಲಾಗಿತ್ತು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9.30ಕ್ಕೆ ಪುರಭವನ ಮುಂಭಾಗ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಸಚಿವೆ ಉಮಾಶ್ರೀ ಮಾಲಾರ್ಪಾಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಮೂರು ಗಂಟೆಗೆ ಚೆನ್ನಮ್ಮ ಅವರ ಸ್ತಬ್ಧ ಚಿತ್ರದೊಂದಿಗೆ 10 ಜಾನಪದ ಕಲಾ ತಂಡಗಳು ಸ್ವಾತಂತ್ರ ಉದ್ಯಾನದಿಂದ ವಿಧಾನಸೌಧದವರೆಗೂ ಮೆರವಣಿಗೆ ಹೊರಡಲಿದೆ ಎಂದರು.

ಅಂದು ಸಂಜೆ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಕನಕ ಗುರುಪೀಠದ ನಿರಂಜನಾನಂದಪುರಿ ಮಹಾಸ್ವಾಮಿ ಸಾನಿದ್ಯ ವಹಿಸಲಿದ್ದಾರೆ. ಈ ವೇಳೆ ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನಸಭೆಯ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ್, ಸಚಿವರಾದ ಆರ್.ರೋಷನ್ ಬೇಗ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ, ವಿನಯ್ ಕುಲಕರ್ಣಿ, ಎಸ್.ಎಸ್.ಮಲ್ಲಿಕಾರ್ಜುನ, ಈಶ್ವರ್ ಖಂಡ್ರೆ, ಪರಿಷತ್ತಿನ ಸದಸ್ಯ ಬಸವರಾಜ ರಾಯರೆಡ್ಡಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಖಡ್ಗ ವಾಪಸ್ ತರಲು ಆಗ್ರಹ: ಲಂಡನ್‌ನ ದಿ ಪ್ರೈಸ್ ಆಫ್ ಕಿತ್ತೂರು ಸಂಗ್ರಹಾಲಯದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಖಡ್ಗವನ್ನು ರಾಜ್ಯಕ್ಕೆ ಮರಳಿ ವಾಪಸ್ ತರಬೇಕು. ಈ ಕುರಿತು ಕೂಡಲೇ ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗುವುದು. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಸಮಾಧಿಯನ್ನು ಮುಂದಿನ ಒಂದು ವರ್ಷ ಅವಧಿಯೊಳಗೆ ಅಭಿವೃದ್ಧಿಪಡಿಸಿ ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

ನಗರದ ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಇರುವ ವೃತ್ತಕ್ಕೆ ಹಿಂದೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಎಂದು ಹೆಸರಿತ್ತು. ಬಳಿದ ಈ ವೃತ್ತಕ್ಕೆ ಹಡ್ಸನ್ ವೃತ್ತ ಎಂದು ಹೆಸರಿಡಲಾಗಿದೆ. ಚೆನ್ನಮ್ಮ ಅವರ ಜಯಂತಿ ಅಂಗವಾಗಿ ಬಿಬಿಎಂಪಿ ಈ ವೃತ್ತಕ್ಕೆ ಮರಳಿ ಚೆನ್ನಮ್ಮಳ ಹೆಸರಿಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಂಚಮಶಾಲಿ ಲಿಂಗಾಯತ ಸಮುದಾಯದ ಮುಖಂಡ ಡಾ.ಬಿ.ಎಸ್.ಪಾಟೀಲ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X