ಮಡಿಕೇರಿ: 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಮಡಿಕೇರಿ, ಅ.21: ಜಿಲ್ಲಾಡಳಿತ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಕ್ಟೋಬರ್, 23 ರಂದು ಬೆಳಗ್ಗೆ 11 ಗಂಟೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಜಿಪಂ ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಸಂಸದ ಪ್ರತಾಪ್ ಸಿಂಹ, ಟಿ.ಪಿ. ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮದೆಮಹೇಶ್ವರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸಿದ್ದರಾಜು ಇತರರು ಪಾಲ್ಗೊಳ್ಳಲಿದ್ದಾರೆ.
Next Story





