ಯುವಕನಿಗೆ ಚೂರಿ ಇರಿತ: ಆರೋಪಿಯ ಬಂಧನ
ಶಿವಮೊಗ್ಗ, ಅ.22: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ನೆಲ್ಲಿಸರಕ್ಯಾಂಪ್ ಗ್ರಾಮದಲ್ಲಿ ನಡೆದಿದೆ.
ನೆಲ್ಲಿಸರಕ್ಯಾಂಪ್‍ನ ನಿವಾಸಿ ಗೋವರ್ಧನ್(22) ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಗಾಯಾಳನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರೋಪಿ ಪ್ರಕಾಶ್(32) ರನ್ನುಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆಂದು ತಿಳಿದು ಬಂದಿದೆ.
ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿದಂತೆ ಗೋವರ್ಧನ್ ಹಾಗೂ ಆರೋಪಿ ಪ್ರಕಾಶ್ ನಡುವೆಈ ಹಿಂದೆ ಜಗಳವಾಗಿತ್ತು. ಈ ವೈಷಮ್ಯದ ಹಿನ್ನೆಲೆಯಲ್ಲಿ ಆರೋಪಿಯು ಗೋವರ್ಧನ್‍ರವರ ಮೇಲೆ ಚೂರಿಯಿಂದ ಇರಿದಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.
ಸಬ್ ಇನ್ ಸ್ಪೆಪೆಕ್ಟರ್ ಗುರು ರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





