ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಬಸವರಾಜ ಪಾಟೀಲ್ ಯತ್ನಾಳ್
ಟಿಪ್ಪು ಜಯಂತಿ

ಬೆಂಗಳೂರು, ಅ. 22: ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ನಾನು ಪಾಲ್ಗೊಳ್ಳುವುದಿಲ್ಲ. ಆಹ್ವಾನ ಪತ್ರಿಕೆಯಲ್ಲಿಯೂ ನನ್ನ ಹೆಸರು ಪ್ರಕಟಿಸಬೇಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ರವಿವಾರ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ನಾನು ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿಲ್ಲ. ಮುಂದೆಯೂ ಭಾಗವಹಿಸುವುದಿಲ್ಲ. ಆತನೋರ್ವ ಧರ್ಮಾಂಧ ಎಂದು ಇದೇ ವೇಳೆ ಟೀಕಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ತಾನು ಈವರೆಗೂ ಪ್ರತಿಕ್ರಿಯೆ ನೀಡಿರಲಿಲ್ಲ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರ ವಿರುದ್ಧ ಇನ್ನೂ ಸುಮ್ಮನಿರಲು ಆಗುವುದಿಲ್ಲ ಎಂದ ಎಚ್ಚರಿಸಿದ ಅವರು, ಪೇಜಾವರ ಮಠದ ವಿಶ್ವೇಶ್ವರ ತೀರ್ಥರ ವಿರುದ್ಧ ಹೇಳಿಕೆ ಸರಿಯಲ್ಲ ಎಂದು ಆಕ್ಷೇಪಿಸಿದರು.
Next Story





