Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಲನ ಶೀಲತೆಗೆ ಆದ್ಯತೆ ನೀಡುವುದೇ ಎಡ...

ಚಲನ ಶೀಲತೆಗೆ ಆದ್ಯತೆ ನೀಡುವುದೇ ಎಡ ಪಂಥೀಯ ಚಿಂತನೆ: ಸಾಹಿತಿ ಚಂಪಾ

ವಾರ್ತಾಭಾರತಿವಾರ್ತಾಭಾರತಿ22 Oct 2017 8:53 PM IST
share
ಚಲನ ಶೀಲತೆಗೆ ಆದ್ಯತೆ ನೀಡುವುದೇ ಎಡ ಪಂಥೀಯ ಚಿಂತನೆ: ಸಾಹಿತಿ ಚಂಪಾ

ಮೈಸೂರು, ಅ.22: ಎಲ್ಲರನ್ನು ಅಪ್ಪಿಕೊಳ್ಳುವ ಸಮಾನತೆಯ ಧರ್ಮ ಬಸವ ಧರ್ಮ. ವರ್ತಮಾನದೊಳಗೆ ಉಂಟಾಗಿರುವ ಎಲ್ಲಾ ಗೊಂದಲಗಳನ್ನು ಅರ್ಥೈಸಿಕೊಂಡು ಬಗೆಹರಸಿಕೊಳ್ಳುವ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದೊಳಗೆ ನಾವು ಸಾಗಬೇಕಿದೆ ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಹೇಳಿದ್ದಾರೆ.

ನಗರದ ಕಲಾಮಂದಿರದಲ್ಲಿ ಮಲೆಯೂರು ಗುರುಸ್ವಾಮಿ ಅಭಿನಂದನಾ ಸಮಿತಿ ವತಿಯಿಂದ 'ಮಲೆಯೂರು ಗುರುಸ್ವಾಮಿ ಅವರೊಂದಿಗೆ ಒಂದು ದಿನ... ಮಲೆಯೂರು ನಮ್ಮವರು, ಮಗು-70' ಎಂಬ ಶೀರ್ಷಿಕೆಯಡಿ ರವಿವಾರ ಹಮ್ಮಿಕೊಂಡಿದ್ದ ಪ್ರೊ.ಮಲೆಯೂರು ಗುರುಸ್ವಾಮಿ ಅವರ 'ಬದುಕು-ಬರಹ' ಕುರಿತ ಚಿಂತನೆ ಹಾಗೂ ಅವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಲನ ಶೀಲತೆಗೆ ಆದ್ಯತೆ ನೀಡುವುದೇ ಎಡ ಪಂಥೀಯ ಚಿಂತನೆಯಾಗಿದೆ. ಬದುಕಿನಲ್ಲಿ ಚಲನ ಶೀಲತೆ ಬಯಸುವ ಪ್ರಗತಿಪರರು, ಪ್ರಗತಿಗಾಮಿಗಳೇ ಎಡ ಪಂಥೀಯರು. ಬುದ್ಧ, ಬಸವ ಹಾಗೂ ಬಾಬಾ ಸಾಹೇಬರು ಎಡ ಪಂಥೀಯರು. ಚಲನ ಶೀಲತೆಯ ಮೌಲ್ಯಗಳು ಹಾಗೂ ಮನೋಧರ್ಮ ನಮ್ಮದೆಂದು ಖಾತ್ರಿ ಇದ್ದಾಗ ಎಡ ಪಂಥೀಯರು ಎಂದು ಕರೆಸಿಕೊಳ್ಳಲು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಚಲನ ಶೀಲತೆಗೆ ಬದಲು ಸಮಾಜವನ್ನು ಜಡತ್ವದಲ್ಲೇ ಇರಬೇಕೆಂದು ಬಯಸುವ ಸಿದ್ಧಾಂತವನ್ನು ಇದು ಒಳಗೊಂಡಿದೆ. ಯಥಾಸ್ಥಿತಿ ವಾದ ಸಮರ್ಥನೆ ಮಾಡಿಕೊಳ್ಳುವುದೇ ಬಲ ಪಂಥೀಯ ಎಂದು ಪ್ರತಿಪಾದಿಸಿದರು.

ಮಲೆಯೂರು ಗುರುಸ್ವಾಮಿ ಮೊದಲಿನಿಂದಲೂ ನಮ್ಮ ಸಂಕ್ರಮಣ ಪತ್ರಿಕೆಯ ಬರಹಗಾರರು. ಜತೆಗೆ  ನಮ್ಮ ಚಳವಳಿಗಳಲ್ಲಿ ತಮ್ಮದೇ ಆದ ಮಿತಿಯೊಳಗೆ ಪಾಲ್ಗೊಂಡವರು. ಈ ಹಿಂದೆ ನಾನೂ ಕಸಾಪ ರಾಜ್ಯಾಧ್ಯಕ್ಷನಾಗಿದ್ದ ವೇಳೆ ಅವರು ಚಾಮರಾಜನಗರ ಜಿಲ್ಲಾ ಕಸಾಪದ ಅಧ್ಯಕ್ಷರಾಗಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಅಕ್ಷರದ ಎಲ್ಲಾ ಸಾಧ್ಯತೆಗಳನ್ನು ದುಡಿಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ರೂಪಿಸಿಕೊಂಡಿದ್ದಾರೆ. ಇವರ ಕಾಯಕ ವಲಯ ಮತ್ತಷ್ಟು ವಿಸ್ತರಣೆ ಆಗಲಿ ಎಂದು ಹಾರೈಸಿದ ಅವರು, ಕಳೆದ 10 ವರ್ಷಗಳಿಂದ ಈಚೆಗೆ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಗಮನಿಸಿದರೆ, ಅವು ಪ್ರಜಾಸತ್ಮಾಕ ವೇದಿಕೆಯಾಗಿ ಕೊಡುಗೆ ನೀಡಿವೆ ಎಂದು ನುಡಿದರು.

ಡಾ.ಮಹದೇವಸ್ವಾಮಿ ಹೆಗ್ಗೋಠಾರ ರಚನೆಯ 'ಮಲೆಯೂರು ಗುರುಸ್ವಾಮಿ ಬದುಕು-ಬರಹ' ಕೃತಿ ಬಿಡುಗಡೆ ಮಾಡಿ ಬಳಿಕ ಮಾತನಾಡಿದ ವಾಸು, ತಮ್ಮ ಶಿಷ್ಯ ಸಮೂಹ ತಯಾರು ಮಾಡಿದ ಕೀರ್ತಿ ಮಲೆಯೂರು ಗುರುಸ್ವಾಮಿ ಅವರಿಗೆ ಸಲ್ಲುತ್ತದೆ. ಇವರು 'ಕಪಿಲೆ ಹರಿದಳು ಕಡಿಲಿಗೆ' ಎಂಬ ತಮ್ಮ ಕಾದಂಬರಿಯನ್ನು ಒಬ್ಬ ಪೌರ ಕಾರ್ಮಿಕ ಮಹಿಳೆಗೆ ಅರ್ಪಿಸಿದ್ದು, ಇದು ಅವರಲ್ಲಿ ಕಟ್ಟಕಡೆ ವರ್ಗದ ಬಗ್ಗೆ ಇರುವ ಕಳಕಳಿಯಾಗಿದೆ. ಇವರ ಸಾಹಿತ್ಯ ಸೇವೆ ಇನ್ನು ಹೆಚ್ಚಿನ ರೀತಿಯಲ್ಲಿ ಸಮಾಜಕ್ಕೆ ದೊರೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಹೊಸಮಠದ ಅಧ್ಯಕ್ಷ ಶ್ರೀ ಚಿದಾನಂದ ಸ್ವಾಮೀಜಿ, ವಾಟಾಳು ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದರು. ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಡಾ.ಮೋಹನ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಮಲೆಯೂರು ಗುರುಸ್ವಾಮಿ, ಅಭಿನಂದನಾ ಸಮಿತಿ ಅಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ, ಸಂಚಾಲಕ ಎಂ.ಚಂದ್ರಶೇಖರ್, ಕಾರ್ಯದರ್ಶಿ ಚಿನ್ನಸ್ವಾಮಿ ವಡ್ಡಗೆರೆ ಉಪಸ್ಥಿತರಿದ್ದರು.


ದುಡ್ಡು ಸುರಿದು  ಸಂಪಾದನೆ ಮಾಡುವ ರಾಜಕಾರಣ ದೇಶದಲ್ಲಿದೆ. ಅದರಿಂದ ಜನತೆಗೆ ಬೆಲೆಯೇ ಇಲ್ಲದಂತಾಗಿದೆ. ಅದಕ್ಕೆ ಪರ್ಯಾಯವಾಗಿ ಸಹನೆ, ಪ್ರೀತಿ, ಸಹಬಾಳ್ವೆ, ಸಮಾನತೆಯ ಭಾರತವನ್ನು ಕಟ್ಟಬೇಕಾಗಿದೆ. ಜನಪರವಾದ ರಚನಾತ್ಮಕ ಕೆಲಸಗಳು, ಸೈದ್ಧಾಂತಿಕ ಸಮಾಜ, ನಮ್ಮೊಳಗೆ ಅಂತರಂಗದ ಸಮತ್ವದ ಸಾಧಿಸುವುದೂ ರಾಜಕಾರಣ ಆಗಿದೆ. ಈ ಹಿನ್ನೆಲೆಯಲ್ಲಿ ಸ್ವರಾಜ್ ಇಂಡಿಯಾ ಧ್ಯೇಯ ಬದ್ಧ ನಡೆ, ಧ್ಯೇಯ ಬದ್ಧ ಪಡೆ ಎಂಬ ಘೋಷಣಾ ವಾಕ್ಯದೊಡನೆ ಸುಧಾರಣೆಯ ಉದ್ದೇಶ ನಮ್ಮ ಮುಂದಿದೆ. 

ಸಾಹಿತಿ ದೇವನೂರು ಮಹಾದೇವ, ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷೀಯ ಮಂಡಳಿ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X