ಚಾಲಕನ ನಿಯಂತ್ರಣ ತಪ್ಪಿ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಕಾರು : ಇಬ್ಬರು ಮೃತ್ಯು

ದಾವಣಗೆರೆ,ಅ.23; ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 4 ರ ಲಕ್ಕಮುತ್ತೇನಹಳ್ಳಿಯಲ್ಲಿ ಬಳಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರು ಹುಬ್ಬಳ್ಳಿಯ ಮೂಲದರಾಗಿದ್ದು, ತಕ್ಷಣಕ್ಕೆ ಹೆಸರು ಮತ್ತು ಇತರೆ ವಿವರಗಳು ತಿಳಿದುಬಂದಿಲ್ಲ. ಕಾರು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಹೊಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಕಲ್ಲಿಗೆ ರಭಸವಾಗಿ ಢಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





