Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು;ಅಮಾನಿಕೆರೆಯನ್ನು ಮನರಂಜನಾ,...

ತುಮಕೂರು;ಅಮಾನಿಕೆರೆಯನ್ನು ಮನರಂಜನಾ, ಪಿಟ್‍ನೆಸ್ ಕೇಂದ್ರವಾಗಿ ಅಭಿವೃದ್ದಿಪಡಿಸಲು ಕ್ರಮ:ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ23 Oct 2017 10:38 PM IST
share
ತುಮಕೂರು;ಅಮಾನಿಕೆರೆಯನ್ನು ಮನರಂಜನಾ, ಪಿಟ್‍ನೆಸ್ ಕೇಂದ್ರವಾಗಿ ಅಭಿವೃದ್ದಿಪಡಿಸಲು ಕ್ರಮ:ಜಿಲ್ಲಾಧಿಕಾರಿ

ತುಮಕೂರು.ಅ.25:ತುಮಕೂರು ಅಮಾನೀಕೆರೆಯನ್ನು ಸ್ಮಾರ್ಟ್ ಸಿಟಿಯ ಅನುದಾನದಲ್ಲಿ ಮನರಂಜನಾ ಕೇಂದ್ರದ ಜೊತೆಗೆ ಪಿಟ್‍ನೆಸ್ ಸೆಚಿಟರ್‍ ಆಗಿ ಅಭಿವೃದ್ದಿ ಪಡಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‍ರಾಜ್ ತಿಳಿಸಿದ್ದಾರೆ.

ಮಳೆ ಮತ್ತು ಹೇಮಾವತಿ ನೀರಿನಿಂದ ತುಮಕೂರು ಅಮಾನೀಕೆರೆಗೆ ಶೇ60ರಷ್ಟು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಸಿಇಓ ಕೆ.ಜಿ.ಶಾಚಿತರಾಮ್, ಶಾಸಕರಾದ ಡಾ.ರಫೀಕ್ ಅಹಮದ್ ಅವರೊಂದಿಗೆ ಅಮಾನೀಕೆರೆಗೆ ಭೇಟಿ ನೀಡಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆರೆಗೆ ನೀರು ಬಂದಿರುವುದರಿಂದ ತುಂಬ ಸುಂದರವಾಗಿ ಕಾಣುತ್ತಿದೆ.ಇದನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡುವ ಉದ್ದೇಶದಿಂದ ಸ್ಮಾರ್ಟ್‍ಸಿಟಿ ಅನುದಾನವನ್ನು ಬಳಕೆ ಮಾಡಿಕೊಂಡು ಯೋಗ, ವ್ಯಾಯಾಮದ ಜೊತೆಗೆ,ತೆರದ ಜೀಮ್ ವ್ಯವಸ್ಥೆಗೊಳಿಸಿದರೆ ಇನ್ನೂ ಹೆಚ್ಚಿನ ಪ್ರವಾಸಿಗರನ್ನು ಅಕರ್ಷಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಸಿಇಓ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿ ಪ್ರಸ್ತಾವನೆ ಸಲ್ಲಿಸಿ, ಅನುಮೋದನೆ ಪಡೆಯಲಾಗುವುದು ಎಂದರು.

ಕಳೆದ ಐದಾರು ತಿಂಗಳ ಹಿಂದೆ ಅಮಾನೀಕೆರೆ ರಾಜಗಾಲುವೆ ಒತ್ತುವರಿ ತೆರವು ಮಾಡಿದ್ದರಿಂದ 15 ದಿನಗಳ ಹಿಂದೆ ಸುರಿದ ಬಾರಿ ಮಳೆಗೆ ಕೆರೆಗೆ ನೀರು ಬಂದಿದೆ.ಅಲ್ಲದೆ ಬುಗುಡನಹಳ್ಳಿ ಕೆರೆಯಿಂದಲೂ ನೀರನ್ನು ಪಂಪ್ ಮಾಡಿದ ಪರಿಣಾಮ ಕೆರೆ ಸುಂದರವಾಗಿ ಕಾಣುತ್ತಿದೆ.ಇನ್ನೂ ಕೆಲವು ಕಡೆಗಳಲ್ಲಿ ಒತ್ತುವರಿ ಇದ್ದು,ಅದರನ್ನು ಶೀಘ್ರದಲ್ಲಿಯೇ ತೆರವುಗೊಳಿಸ ಲಾಗುವುದು.ಈಗಾಗಲೇ ಉತ್ತಮವಾಗಿ ಪಾರ್ಕು ನಿರ್ಮಾಣಗೊಂಡಿದೆ.ಇದರ ಜೊತೆಗೆ ಶಿರಾಗೇಟ್ ಭಾಗದಲ್ಲಿಯೂ ಒಂದು ಗೇಟ್ ಸ್ಥಾಪಿಸಿ,ಆ ಭಾಗದಿಂದಲೂ ಜನರು ಬರುವಂತೆ ಮತ್ತು, ಸುತ್ತಲು ವಾಕಿಂಗ್ ಪಾಥ್ ನಿರ್ಮಾಣ ಮಾಡಿದರೆ ಬೆಳಗಿನ ವಾಯುವಿಹಾರಕ್ಕೆ ಹೆಚ್ಚಿನವರಿಗೆ ಅನುಕೂಲವಾಗಲಿದೆ.ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನ್‍ರಾಜ್ ನುಡಿದರು.

ಶಾಸಕ ಡಾ.ರಫೀಕ್ ಅಹಮದ್ ಮಾತನಾಡಿ,ಕಳೆದ ಆಗಸ್ಟ್‍ನಲ್ಲಿ ಜಿಲ್ಲಾಧಿಕಾರಿಗಳು ಅಮಾನಿಕೆರೆಯ ರಾಜಗಾಲುವೆ ಒತ್ತುವರಿ ತೆರವು ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿದ್ದ ಭಾರಿ ಮಳೆಗೆ ಕೆರೆಗೆ ನೀರು ಹರಿದು ಬಂದಿದೆ.ಇದರ ಜೊತೆಗೆ ಬುಗುಡನಹಳ್ಳಿ ಕೆರೆಯಿಂದಲೂ ಅಮಾನೀಕೆರೆಗೆ ನೀರು ಪಂಪ್ ಮಾಡಲಾಗುತ್ತಿದೆ.ಪ್ರಸ್ತುತ ಕೆರೆಯಲ್ಲಿ ಶೇ60ರಷ್ಟು ನೀರಿದ್ದು, ನೋಡಲು ಸುಂದರವಾಗಿ ಕಾಣುತ್ತಿದೆ.ಇತ್ತೀಚೆಗೆ ಸಿದ್ದಗಂಗಾ ಮಠಾಧ್ಯಕ್ಷರಾದ ಡಾ.ಶ್ರೀಶಿವಕುಮಾರಸ್ವಾಮೀಜಿ ಅವರು ಕೆರೆಗೆ ಭೇಟಿ ನೀಡಿ ವೀಕ್ಷಿಸಿ ಖುಷಿ ಪಟ್ಟು ಆಶೀರ್ವದಿಸಿದ್ದಾರೆ.ಅಲ್ಲದೆ ಕೆರೆಗೆ ನೀರು ಬಂದ ನಂತರ ಕೆರೆ ವೀಕ್ಷಣೆಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು,ಭಾನುವಾರ 5-6 ಸಾವಿರ ಜನ ಭೇಟಿ ನೀಡಿದ್ದಾರೆ.ಇದಕ್ಕಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಕೆರೆಯನ್ನು ಮತ್ತಷ್ಟು ಸುಂದರಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಅಗತ್ಯ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳಲಿದ್ದಾರೆ ಎಂದರು.ಈ ವೇಳೆ ಸಿಇಓ ಕೆ.ಜಿ.ಶಾಂತರಾಮ್ ಜೊತೆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X