Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು

ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ23 Oct 2017 11:58 PM IST
share
ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು

ಪುತ್ತೂರು, ಅ. 23: ಸುಳ್ಯದ ಮೋಹನ್ ಜ್ಯುವೆಲ್ಲರಿ ಮಾರ್ಟ್ ಮಾಲಕ ಧೀರಜ್‌ರವರ ಕಾರು ಪುತ್ತೂರು ಅಮ್ಚಿನಡ್ಕದಲ್ಲಿ ಸೇತುವೆಗೆ ಗುದ್ದಿದ ಪರಿಣಾಮವಾಗಿ ಜ್ಯುವೆಲ್ಲರಿಯಲ್ಲಿ ಧೀರಜ್‌ರ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಶಿರಸಿಯ ಯುವಕ ಸ್ಥಳದಲ್ಲೇ ಮೃತಪಟ್ಟ ಹಾಗೂ ಧೀರಜ್ ಗಂಭೀರವಾಗಿ ಗಾಯಗೊಂಡ ಘಟನೆ ಅ.22ರಂದು ರಾತ್ರಿ ನಡೆದಿದೆ.

ಸುಳ್ಯ ಖಾಸಗಿ ಬಸ್ ನಿಲ್ದಾಣ ದಲ್ಲಿರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಸಂಸ್ಥೆಯ ಮಾಲಕ ದಿವಾಕರ ರಾವ್ ಇತ್ತೀಚೆಗೆ ಅಸೌಖ್ಯದಿಂದ ನಿಧನರಾಗಿದ್ದ ಬಳಿಕ ಅವರ ಏಕೈಕ ಪುತ್ರ ಧೀರಜ್ ಅಂಗಡಿ ವ್ಯವಹಾರ ನೋಡಿ ಕೊಳ್ಳುತ್ತಿದ್ದರು. ಅ.21ರಂದು ಧೀರಜ್‌ರವರು ತಮ್ಮ ಜ್ಯುವೆಲ್ಲರ್‌ಗೆ ಬೆಳ್ಳಿಯ ವಸ್ತುಗಳನ್ನು ಖರೀದಿ ಮಾಡಲೆಂದು ಉಡುಪಿಗೆ ತನ್ನ ಅಂಗಡಿಯ ಕೆಲಸದಾಳು ಶಿರಸಿಯ ಗಜರನ್ನು ಕರೆದುಕೊಂಡು ಹೋಗಿದ್ದರು. ಉಡುಪಿಯಲ್ಲಿ ಬೆಳ್ಳಿ ಖರೀದಿಸಿ, ಅದನ್ನು ತಮ್ಮ ಕಾರಿನಲ್ಲಿಟ್ಟು ರಾತ್ರಿ ಉಡುಪಿಯಿಂದ ಸುಳ್ಯಕ್ಕೆ ಹೊರಟಿದ್ದರು. ತಡರಾತ್ರಿ 1 ಗಂಟೆ ಸುಮಾರಿಗೆ ಕಾರು ಅಮ್ಚಿನಡ್ಕದ ಬಳಿ ಬರುತ್ತಿದ್ದಂತೆ ಮಂಜು ಮುಸುಕಿದ ವಾತಾವರಣ ಇದ್ದುದರಿಂದಾಗಿ ರಸ್ತೆಯ ಬದಿಯಲ್ಲಿದ್ದ ಕಾಂಕ್ರೀಟ್ ಮೋರಿಗೆ ಕಾರು ಗುದ್ದಿತು. ಕಾರು ಗುದ್ದಿದ ರಭಸಕ್ಕೆ ಕಾರಿನ ಎದುರು ಕುಳಿತಿದ್ದ ಗಜ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.

ಕಾರು ಚಲಾಯಿಸುತ್ತಿದ್ದ ಧೀರಜ್‌ರವರ ಕಾಲಿಗೆ ಮತ್ತು ಕೈಗೆ ಬಲವಾದ ಏಟಾಯಿತು. ಘಟನೆ ತಡರಾತ್ರಿ ನಡೆದುದರಿಂದ ಆ ಸಮಯದಲ್ಲಿ ಆ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಆ ರಸ್ತೆಯಲ್ಲಿ ಮಂಗಳೂರಿನಿಂದ ಮೈಸೂರಿಗೆ ಪ್ರವಾಸ ತೆರಳುತ್ತಿದ್ದ  ಯುವಕರ ತಂಡವೊಂದು ಅಪಘಾತವಾಗಿರುವುದನ್ನು ಕಂಡು ನಿಲ್ಲಿಸಿ, ಗಾಯಗೊಂಡಿದ್ದ ಧೀರಜ್‌ರನ್ನು ಕಾಪಾಡಿದರಲ್ಲದೆ, ಅಕ್ಕಪಕ್ಕದ ಮನೆಯವರನ್ನು ಎಬ್ಬಿಸಿದರೆಂದೂ ಹೇಳಲಾಗಿದೆ.

ಗಾಯಾಳು ಧೀರಜ್ ತಾನು ಸುಳ್ಯದ ಜಟ್ಟಿಪಳ್ಳದವನೆಂದು ಹೇಳಿದ ಕಾರಣ, ಆ ಯುವಕರು ಜಟ್ಟಿಪಳ್ಳದಲ್ಲಿ ತಮ್ಮ

ಪರಿಚಯದ ತರಕಾರಿ ಅಬ್ದುಲ್ಲರಿಗೆ ಫೋನ್ ಮಾಡಿ ವಿಷಯ ತಿಳಿಸಿದರೆಂದೂ, ಅಬ್ದುಲ್ಲರು ನ.ಪಂ. ಸದಸ್ಯ ರಮಾನಂದ ರೈ ಮತ್ತು ಇತರ ಯುವಕರಿಗೆ ತಿಳಿಸಿದರೆಂದೂ ತಿಳಿದು ಬಂದಿದೆ. ರಮಾನಂದ ರೈಯವರು ಬಾತಿಶ, ಫವಾಝ್, ಸಿಯಾಜ್ ಸಿ.ಎ, ಬದ್ರುದ್ದೀನ್, ಫಯಾಝ್ ಜಟ್ಟಿಪಳ್ಳ, ಶಫೀಕ್

ಕೆರೆಮೂಲೆಯವರೊಡನೆ ಧೀರಜ್‌ರ ಮನೆಗೆ ಹೋಗಿ ವಿಷಯ ತಿಳಿಸಿ ಸುಳ್ಯ ಆಸ್ಪತ್ರೆಗೆ ಬಂದರು. ಅದೇ ವೇಳೆಗೆ ಮಂಗಳೂರಿನ  ಯುವಕರು, 108ಕ್ಕೆ ಫೋನ್ ಮಾಡಿ, ಬಳಿಕ ತಮ್ಮ ವಾಹನ ದಲ್ಲೇ ಧೀರಜ್‌ರನ್ನು ಹಾಗೂ 108ನಲ್ಲಿ ಗಜರವರ ದೇಹವನ್ನು ಸುಳ್ಯ ಆಸ್ಪತ್ರೆಗೆ ತಂದರು. ಗಾಯಾಳು ಧೀರಜ್‌ರನ್ನು ತುರ್ತು ಚಿಕಿತ್ಸೆಗಾಗಿ ಸಂಬಂಧಿ ಗುರುದತ್ ಮತ್ತಿತರರೊಂದಿಗೆ ಮಂಗಳೂರಿನ  ಆಸ್ಪತ್ರೆಗೆ ಕಳುಹಿಸಲಾಯಿತು.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X