ಅ.25: ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ
ಉಡುಪಿ, ಅ.24: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವ್ಯೆದ್ಯರು ಮತ್ತು ನರ್ಸಿಂಗ್ ಕಾಲೇಜಿನ ಉಪನ್ಯಾಸಕರುಗಳಿಗೆ ಪ್ರಥಮ ಚಿಕಿತ್ಸಾ ತರಬೇತುದಾರರ ತರಬೇತಿ ಶಿಬಿರವನ್ನು ಅ.25ರಂದು ಬೆಳಗ್ಗೆ 9:30ಕ್ಕೆ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಸಂಜೀವ ಎಂ. ಪಾಟೀಲ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ರಾಜ್ಯ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಸಭಾಪತಿ ಡಾ.ಉಮೇಶ್ ಪ್ರಭು ವಹಿಸಲಿ ರುವರು ಎಂದು ಪ್ರಕಟಣೆ ತಿಳಿಸಿದೆ.
Next Story





