Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕೀಯ ಸ್ವಾರ್ಥಕ್ಕಾಗಿ ಟಿಪ್ಪು ಕುರಿತು...

ರಾಜಕೀಯ ಸ್ವಾರ್ಥಕ್ಕಾಗಿ ಟಿಪ್ಪು ಕುರಿತು ಅಪಪ್ರಚಾರ: ಹಿರಿಯ ಚಿಂತಕ ಜಿ.ರಾಮಕೃಷ್ಣ

ವಾರ್ತಾಭಾರತಿವಾರ್ತಾಭಾರತಿ24 Oct 2017 10:02 PM IST
share
ರಾಜಕೀಯ ಸ್ವಾರ್ಥಕ್ಕಾಗಿ ಟಿಪ್ಪು ಕುರಿತು ಅಪಪ್ರಚಾರ: ಹಿರಿಯ ಚಿಂತಕ ಜಿ.ರಾಮಕೃಷ್ಣ

ಬೆಂಗಳೂರು, ಅ.23: ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಮಹಾನ್ ಹೋರಾಟಗಾರ ಟಿಪ್ಪು ಸುಲ್ತಾನ್ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ವಿಷಾದಿಸಿದರು.

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಸರಕಾರಿ ಕಲಾ ಕಾಲೇಜಿನ ಕನ್ನಡ ವಿಭಾಗ ನಗರದ ಬಾಪೂಜಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಚರಿತ್ರೆಯ ನಿರೂಪಣೆ: ವರ್ತಮಾನದ ಪ್ರವೃತ್ತಿಗಳು’ ಕುರಿತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸೇರಿದಂತೆ ಸಂಘಪರಿವಾರ ಇತಿಹಾಸದ ಘಟನೆಗಳನ್ನು ತಮ್ಮ ಕೋಮುವಾದಿ ಸಿದ್ಧಾಂತಕ್ಕೆ ಪೂರಕವಾಗುವಂತೆ ಪರಿವರ್ತಿಸಿಕೊಳ್ಳುತ್ತಿವೆ. ಟಿಪ್ಪು ಸುಲ್ತಾನ್ ಕೇವಲ ಮುಸ್ಲಿಮ್ ಎಂಬ ಒಂದೇ ಕಾರಣಕ್ಕೆ ಆತನ ಎಲ್ಲ ಜನಪರ ಕೆಲಸಗಳನ್ನು ಮರೆ ಮಾಚಿ ಕೋಮುವಾದಿ ಬಣ್ಣ ಕಟ್ಟುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿಯಾದ ಬೆಳವಣಿಗೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇನ್ನೊಂದೆಡೆ ಕೆಲವು ಇತಿಹಾಸದ ಕೆಲವು ಮಹಾನ್ ನಾಯಕರ ಚಿಂತನೆಗಳನ್ನು ಕೇಸರಿ ಮಯಗೊಳಿಸಿ ಅನಗತ್ಯವಾಗಿ ವಿಜೃಂಭಿಸಲಾಗುತ್ತಿದೆ. ಛತ್ರಪತಿ ಶಿವಾಜಿಯ ಜನಪರ ಚಿಂತನೆಗಳನ್ನು ಮೂಲೆಗುಂಪು ಮಾಡಿ ಹಿಂದೂ ನಾಯಕನ ಪಟ್ಟ ಕಟ್ಟಲಾಗುತ್ತಿದೆ. ಹಾಗೆಯೇ ಸಾವಿರಾರು ಕೋಟಿ ರೂ.ಖರ್ಚು ಮಾಡಿ ಪ್ರತಿಮೆಯನ್ನು ಸ್ಥಾಪಿಸಿ ಅನಗತ್ಯವಾಗಿ ವೈಭವೀಕರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಾಚೀನತೆಯ ವೈಭವೀಕರಣ: ಬ್ರಾಹ್ಮಣವಾದಿಗಳು ದೇಶದ ಜನತೆಯನ್ನು ಭಾವನಾತ್ಮಕವಾಗಿ ಕಟ್ಟಿಹಾಕುವಲ್ಲಿ ನಿಸ್ಸೀಮರಾಗಿದ್ದಾರೆ. ಪ್ರಪಂಚದಲ್ಲಿ ಯಾವುದೇ ಸಂಶೋಧನೆಗಳು ನಡೆದರೂ ನಮ್ಮ ವೇದಗಳಲ್ಲಿ ಈ ಸಂಶೋಧನೆಗಳ ಉಲ್ಲೇಖವಿದೆ. ಸಾವಿರಾರು ವರ್ಷಗಳ ಹಿಂದೆಯೇ ಅಂತರ್ ಗ್ರಹಗಳ ನಡುವೆ ಪ್ರಯಾಣ ಮಾಡಲಾಗುತ್ತಿತ್ತು. ಹೀಗೆ ಕಟ್ಟುಕತೆಗಳ ಮೂಲಕ ಜನತೆಯನ್ನು ವೈಜ್ಞಾನಿಕತೆಯತ್ತ ಹೋಗದಂತೆ ತಡೆಯಲಾಗುತ್ತಿದೆ ಎಂದು ಅವರು ವಿಷಾದಿಸಿದರು.

ಇತಿಹಾಸಕಾರರಿಗೆ ಶಿಸ್ತೇ ಮುಖ್ಯ: ಪ್ರಪಂಚದ ಹಲವು ಇತಿಹಾಸ ತಜ್ಞರು ಇತಿಹಾಸ ಕ್ಷೇತ್ರವನ್ನು ಅತ್ಯಂತ ಶಿಸ್ತಿನಿಂದ, ತರ್ಕಬದ್ಧವಾಗಿ ಕಟ್ಟಿಕೊಂಡು ಬಂದಿದ್ದರು. ಆದರೆ, ಸಂಘಪರಿವಾರ ಇತಿಹಾಸವನ್ನು ತಮ್ಮ ಸ್ವಾರ್ಥಕ್ಕೆ ಬೇಕಾದಂತಹ ಅಸ್ತ್ರಗಳನ್ನಾಗಿ ಪರಿವರ್ತಿಸಿಕೊಂಡರು. ಇಂತಹ ಕಠಿಣ ಸ್ಥಿತಿಯಲ್ಲಿ ಇತಿಹಾಸದ ಕುರಿತು ಪ್ರೀತಿ ಇರುವವರು ಸಂಘಪರಿವಾರದ ಷಡ್ಯಂತ್ರಗಳನ್ನು ತಮ್ಮ ಶಿಸ್ತು ಬದ್ಧ ಅಧ್ಯಯನಗಳಿಂದ ಬಯಲು ಮಾಡಬೇಕು ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ಉಪ ನಿರ್ದೇಶಕಿ ಅಂಬುಲಾಕ್ಷಿ, ಸರಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಎಂ.ವೆಂಕಟಶಾಮಿರೆಡ್ಡಿ ಹಾಗೂ ನಾಟಕಕಾರ ಕೆ.ವೈ.ನಾರಾಯಣಸ್ವಾಮಿ ಮತ್ತಿತರರಿದ್ದರು.

ಬ್ರಾಹ್ಮಣವಾದಿಗಳು ಮುಸ್ಲಿಮರನ್ನು ಹೊರಗಿನಿಂದ ಬಂದವರು ಎಂದು ಬಿಂಬಿಸುವ ಮೂಲಕ ಜನತೆಯಲ್ಲಿ ಒಡಕನ್ನುಂಟು ಮಾಡುತ್ತಿದ್ದಾರೆ. ಆದರೆ, ಇದಕ್ಕಿಂತ ಮೊದಲೇ ದೇಶಕ್ಕೆ ಹೊರಗಿನಿಂದ ಬಂದವರು ಆರ್ಯರಾಗಿರುವ ಬ್ರಾಹ್ಮಣರಾಗಿದ್ದಾರೆ. ಋಗ್ವೇದದಲ್ಲಿ ಕುದುರೆಗಳ ಪ್ರಸ್ತಾಪ ಹೆಚ್ಚು ಬರುತ್ತದೆ. ಆದರೆ, ಸಿಂದೂ ನಾಗರಿಕತೆಯಲ್ಲಿ ಎಲ್ಲಿಯೂ ಕುದುರೆಗಳ ಪ್ರಸ್ತಾಪವಿಲ್ಲ. ಬದಲಾಗಿ ಹಸು, ಎತ್ತು, ಎಮ್ಮೆ, ಸೇರಿದಂತೆ ಹಲವು ಪ್ರಾಣಿಗಳ ಪ್ರಸ್ತಾಪ ಬರುತ್ತದೆ. ಈ ಹಿನ್ನೆಲೆಯಲ್ಲಿ ಗಮನಿಸುವುದಾದರೆ ಋಗ್ವೇದದ ಪ್ರತಿಪಾದಕರಾದ ಆರ್ಯರು ಹೊರಗಿನಿಂದ ಬಂದಿದ್ದಾರೆ ಎಂಬುದು ಖಚಿತವಾಗಿದೆ.
 -ಡಾ.ಜಿ.ರಾಮಕೃಷ್ಣ, ಹಿರಿಯ ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X