ಸೊರಬ: ಕೇಂದ್ರ ಸರಕಾರದ ಜನ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸೊರಬ, ಅ.24: ಕೇಂದ್ರ ಸರ್ಕಾರದ ಜನ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕು ಯುವ ಕಾಂಗ್ರೆಸ್ ಘಟಕದ ವತಿಯಿಂದ ಮಂಗಳವಾರ ಪಟ್ಟಣದ ಅಂಚೆ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿ ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಕರುಣಕರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ ಎರಡು ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು, ಈವರೆಗೂ ಉದ್ಯೋಗ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಹಿಂದೆ ಕೊಟ್ಟ ಮಾತಿನಂತೆ ಭರವಸೆಯನ್ನು ಈಡೇರಿಸದಾ ಪ್ರಧಾನಿಯವರು ತಮ್ಮ ಐದು ವರ್ಷದ ಆಡಳಿತಾವಧಿಯಲ್ಲಿ ಹತ್ತು ಕೋಟಿ ಯುವಕರಿಗೆ ಉದ್ಯೋಗ ಕೊಡಿಸಲು ಇವರಿಂದ ಹೇಗೆ ಸಾಧ್ಯವೇ ಎಂದು ಪ್ರಶ್ನೆಸಿದರು.
ದಿನನಿತ್ಯದ ಜನ ಬಳಕೆಯ ವಸ್ತುಗಳು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ. ಸಾರ್ವಜನಿಕರು ಸಂಕಷ್ಟ ಪಡುವಂತಾಗಿದೆ. ಜನತೆ ಈಗಲಾದರು ಎಚ್ಚೆತ್ತುಕೊಳ್ಳಬೇಕಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ದೋರಣೆಯನ್ನು ಪ್ರತಿಯೊಬ್ಬರು ಖಂಡಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಹಬೀಬುಲ್ಲಾ ಆನವಟ್ಟಿ, ವೀರೇಂದ್ರ ಪಾಟೀಲ್, ಪದಾಧಿಕಾರಿಗಳಾದ ಶಶಿಕುಮಾರ್, ಶರತ್, ಸಂತೋಷ್ ಪುರ, ಗಣಪತಿ, ಅಲ್ಲಾಬಕ್ಷ್, ಪ್ರಮುಖರಾದ ಪರಸಪ್ಪ, ಅಣ್ಣಪ್ಪ, ಹಿರಿಯಣ್ಣ, ಗೋಪಾಲ, ಜಿ. ಕೆರಿಯಪ್ಪ, ರಶೀದ್ ಹಿರೇಕೌಂಶಿ, ನಾಸಿರ್, ಪುಂಡಲೀಕಪ್ಪ ಮತ್ತಿತರರಿದ್ದರು.







