Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಗಾಂಜಾ ಮಾರಾಟ: ವಿದ್ಯಾರ್ಥಿಗಳ ಬಂಧನ

​ಗಾಂಜಾ ಮಾರಾಟ: ವಿದ್ಯಾರ್ಥಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Oct 2017 11:24 PM IST
share

ಮಂಗಳೂರು, ಅ. 24: ನಗರದ ಕಾಲೇಜೊಂದರ ಹಾಗೂ ಬಲ್ಮಠದ ಪರಿಸರದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ಮೂರು ಮಂದಿ ವಿದ್ಯಾರ್ಥಿಗಳನ್ನು ರೌಡಿ ನಿಗ್ರಹದ ದಳದ ಪೊಲೀಸರು ಬಂಧಿಸಿದ್ದಾರೆ.

ಪಾಂಡೇಶ್ವರದ ಕಾಲೇಜಿನ ಮೂರನೇ ವರ್ಷದ ಇಂಟೀರಿಯರ್ ಡಿಸೈನಿಂಗ್ ವಿದ್ಯಾರ್ಥಿಗಳಾದ ಕೇರಳದ ಶಹೀನ್ ಕೆ.ಆಯೂಬ್ (21), ಶೆಹನ್ ಬಶೀರ್ (20), ಸಚಿನ್ ಪ್ರದೀಪನ್(20) ಬಂಧಿತ ಆರೋಪಿಗಳು.

ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದ ದಳದ ಸಹಾಯಕ ಪೊಲೀಸ್ ಆಯುಕ್ತರಿಗೆ ಮಂಗಳೂರು ನಗರದ ಬಲ್ಮಠ ಆರ್ಯ ಸಮಾಜ ರಸ್ತೆಯಲ್ಲಿರುವ  ಕಟ್ಟಡದ 4ನೆ ಮಹಡಿಯಲ್ಲಿ ಬಾಡಿಗೆ ವಾಸವಾಗಿರುವ ಪಾಂಡೇಶ್ವರದ  ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಕಟ್ಟಡದ ಕೊಠಡಿಯಲ್ಲಿ ವಿದ್ಯಾರ್ಥಿಗಳು ಗಾಂಜಾದೊಂದಿಗೆ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆಯ ಹಾಲ್‌ನ ಕಪಾಟಿನಲ್ಲಿದ್ದ ಸ್ಕೂಲ್ ಬ್ಯಾಗಿನಲ್ಲಿ ಪ್ಯಾಕೇಟು ಮಾಡಿ ಮಾರಾಟ ಮಾಡಲು ಸಿದ್ಧ ಮಾಡಿ ಇಟ್ಟಿದ್ದ 12 ಗಾಂಜಾ ಪ್ಯಾಕೇಟ್ ಮತ್ತು ಬಿಡಿ ಗಾಂಜಾ ಸೇರಿ ಒಟ್ಟು 400 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರ ಬೆಲೆ ಸುಮಾರು ರೂ 10,000 ಎಂದು ಅಂದಾಜಿಸಲಾಗಿದೆ. ಅಲ್ಲದೆ ಆರೋಪಿಗಳ ಬಳಿಯಿದ್ದ 4 ಮೊಬೈಲ್ ಸೇರಿದಂತೆ ಸುಮಾರು 32 ಸಾವಿರ ಮೊತ್ತದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಸುಮಾರು 1 ವರ್ಷದಿಂದ ಕೇರಳದಿಂದ ಗಾಂಜಾವನ್ನು ತಂದು, ಪ್ಯಾಕೇಟ್ ಮಾಡಿ ಸಾರ್ವಜನಿಕರಿಗೆ ಮತ್ತು  ಕಾಲೇಜಿನ ಬಳಿಯಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಪ್ರಮುಖ ಆರೋಪಿ ಈಶ್ವರನ್ ಎಂಬವನು ಗಾಂಜಾ ಪೂರೈಸುತ್ತಿದ್ದ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸೇಲ್ ಆರ್ ವ್ಯವಸ್ಥೆ ಪ್ರಮುಖ ಆರೋಪಿ ಈಶ್ವರನ್ ಬಳಿಯಿಂದ ಆರೋಪಿಗಳು ಗಾಂಜಾವನ್ನು ಪಡೆದು ಮಾರಾಟ ಮಾಡುತ್ತಿದ್ದು, ಈಶ್ವರನ್ ಇವರಿಗೆ  ಕೂಡ ನೀಡುತ್ತಿದ್ದ ಎಂದು ತಿಳಿದುಬಂದಿದೆ. ತಲಾ 50 ಗ್ರಾಂ ತೂಕದ ಗಾಂಜಾದ 5 ಪ್ಯಾಕೆಟ್ ಖರೀದಿಸಿದರೆ ಒಂದು ಪ್ಯಾಕೆಟ್‌ನ್ನು ಉಚಿತವಾಗಿ ನೀಡುವಂತಹ ವ್ಯವಸ್ಥೆಯನ್ನು ಮಾಡಿ ಮಾರಾಟ ಮಾಡಲು ಈಶ್ವರನ್ ಉತ್ತೇಜನ ನೀಡುತ್ತಿದ್ದ ಎನ್ನಲಾಗಿದೆ.

ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನಿರ್ದೇಶನದಲ್ಲಿ ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್‌ ಅವರ ಮಾರ್ಗದರ್ಶನದಲ್ಲಿ ಮಂಗಳೂರು ರೌಡಿ ನಿಗ್ರಹ ದಳದ ಎ.ಸಿ.ಪಿ. ಕೆ.ರಾಮರಾವ್ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X