Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‍ನಲ್ಲಿ `ನಿಂಗೋಲ್ ಚಕೋಬ'...

ಆಳ್ವಾಸ್‍ನಲ್ಲಿ `ನಿಂಗೋಲ್ ಚಕೋಬ' ಮಣಿಪುರಿ ಹಬ್ಬ

ವಾರ್ತಾಭಾರತಿವಾರ್ತಾಭಾರತಿ25 Oct 2017 8:39 PM IST
share
ಆಳ್ವಾಸ್‍ನಲ್ಲಿ `ನಿಂಗೋಲ್ ಚಕೋಬ ಮಣಿಪುರಿ ಹಬ್ಬ

ಮೂಡುಬಿದಿರೆ, ಅ. 25: ಮಣಿಪುರದಿಂದ ಹೊರಗೆ ಓದುವ ವಿದ್ಯಾರ್ಥಿಗಳ ಬಗ್ಗೆ ಮಣಿಪುರದ ಜನರಿಗೆ ಒಂದು ರೀತಿಯ ನಕಾರಾತ್ಮಕ ನಿಲುವಿದೆ. ಇತರ ರಾಜ್ಯಗಳಲ್ಲಿ ಓದುತ್ತಿರುವ ಮಣಿಪುರಿ ವಿದ್ಯಾರ್ಥಿಗಳು ತಮ್ಮ ಸಂಸ್ಕೃತಿಯನ್ನು ಅರಿಯಲಾರರು ಎಂಬುದು ಈ ನಿಲುವಿನ ಹಿಂದಿರುವ ಕಲ್ಪನೆ.  ಆದರೆ ಆಳ್ವಾಸ್‍ನಲ್ಲಿ ಆಯೋಜಿಸಿರುವ ಮಣಿಪುರಿ ಹಬ್ಬ ನಮ್ಮ ಮಣಿಪುರಿ ಸಂಸ್ಕೃತಿಯನ್ನು ಚಿತ್ರಿಸಿ ಕೊಡುವುದಲ್ಲದೆ ಅವರ ಬಗ್ಗೆ ಇರುವ ಪೂರ್ವಾಗ್ರಹ ಪೀಡಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುತ್ತದೆ ಎಂದು ಮಣಿಪಾಲ ಕಾಲೇಜಿನ ನರ್ಸಿಂಗ್ ವಿಭಾಗದ ಮುಖ್ಯಸ್ಥೆ ಎಲ್ಸಾ ಸನಾತೊಂಬ ದೇವಿ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಿಜಾರಿನ ಎಐಇಟಿ ಕ್ಯಾಂಪಸ್‍ನಲ್ಲಿ ಆಯೋಜಿಸಿದ್ದ ಮಣಿಪುರಿ ಹಬ್ಬ `ನಿಂಗೋಲ್ ಚಕೋಬ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಣಿಪುರ ಶಿಕ್ಷಣ ಸಚಿವರಾದ  ಥೋಕೋಮ್ ರಾಧೆಶಾಮ್ ಸಿಂಗ್ ವಿಡಿಯೋ ತುಣುಕು ಕಳುಹಿಸುವ ಮೂಲಕ ಹಬ್ಬದ ಆಚರಣೆಯನ್ನು ಬೆಂಬಲಿಸಿದ್ದಲ್ಲದೆ, ಆಳ್ವಾಸ್  ಕಾಲೇಜಿನಲ್ಲಿ ಮಣಿಪುರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ವಸತಿ ನೀಡುತ್ತಿರುವುದಕ್ಕೆ ಕಾಲೇಜಿನ ಮುಖ್ಯಸ್ಥರಾದ ಮೋಹನ ಆಳ್ವರಿಗೆ ಕೃತಜ್ಞತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಂಸ್ಕೃತಿ ವಿನಿಮಯ ಎರಡೂ ಕಡೆಯಿಂದ ಸಾಧ್ಯವಾಗಬೇಕು. ಇಂತಹ ವಿನಿಮಯ ವಿಭಿನ್ನ ಸಂಸ್ಕೃತಿಯ ಜನರ ನಡುವೆ ಉತ್ತಮ ಬಾಂಧವ್ಯ ಬೆಸೆಯುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಪ್ರದೇಶಗಳ ಹಬ್ಬಗಳು, ಸಂಸ್ಕೃತಿಯ ಆಚರಣೆ ಹೆಚ್ಚು ಸೂಕ್ತವಾದವು ಎಂದರು. 

ಆರ್‍ಎಸ್‍ಎಸ್ ಪೂರ್ವಾಂಚಲ ಸಂಘಟಕ ಪುಪ್ಪುರಾಜ್, ನಿಟ್ಟೆ ವಿಶ್ವವಿದ್ಯಾನಿಲಯದ ಸಂಶೋಧನ ವಿಭಾಗದ ಅನಿರ್ಬನ್ ಚಕ್ರವರ್ತಿ ಹಾಗೂ ಗುನಿಮಾಲ ಚಕ್ರವರ್ತಿ ಉಪಸ್ಥಿತರಿದ್ದರು 

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನಾಟಕ, ನೃತ್ಯ, ಸಂಗೀತ, ಸಾಹಸ ಪ್ರದರ್ಶನ ನಡೆಯಿತು. ವಿಶೇಷ ಆಕರ್ಷಣೆಯಾಗಿ ಮಣಿಪುರದ ಖಾದ್ಯಗಳಾದ ಛಿಂಜೊ ಉತಿ, ಎರೊಂಬಾ, ಕೊಂಗ್‍ಹೌ, ಹಿಯೊಂಥೊವಾ ಮೊಯ್‍ರಾಂಗುಗಳ್ಳನ್ನೊಳಗೊಂಡ ಅದ್ಧೂರಿ ಭೋಜನವನ್ನು ಏರ್ಪಡಿಸಲಾಗಿತ್ತು. ನಿಂಗೊಲ್ ಚಕೋಬ ಆಚರಣೆಯ ಮೂಲಕ ಮಣಿಪುರ ರಾಜ್ಯದ ಸಂಸ್ಕೃತಿ, ಸಂಪ್ರದಾಯವನ್ನು  ಕನ್ನಡಿಗರಿಗೆ ಪರಿಚಯಿಸುವ ಪ್ರಯತ್ನ ನಡೆಯಿತು.

 

ನಿಂಗೊಲ್ ಕಕೋಬ್
ನಿಂಗೊಲ್ ಚಕೋಬ ಮಣಿಪುರದ ವಿಶೇಷ ಆಚರಣೆಗಳಲ್ಲೊಂದು. `ನಿಂಗೊಲ್' ಎಂದರೆ 'ಮಗಳು', `ಚಕೋಬ' ಎಂದರೆ 'ಹಬ್ಬ'. ಈ ಹಬ್ಬದಂದು ಮಣಿಪುರದಲ್ಲಿ ಮಹಿಳೆಯರು ಜಾತಿ ಅಂತಸ್ತಿನ ಬೇಧ ಮರೆತು ಒಟ್ಟು ಸೇರುತ್ತಾರೆ. ಅಂದು ಪುರುಷರು ತಾವೇ ಸ್ವತಃ ಭೋಜನ ತಯಾರಿಸಿ, ತಮ್ಮ ತಾಯಿ, ಅಕ್ಕ, ತಂಗಿ, ಹೆಂಡತಿ, ಮಗಳು ಮತ್ತು ಪ್ರೀತಿ ಪಾತ್ರರಾದವರಿಗೆ ತಿನ್ನಿಸುತ್ತಾರೆ. ನಂತರ ಉಡುಗೊರೆಗಳನ್ನು ನೀಡಿ ಅವರನ್ನು ಹಾರೈಸುತ್ತಾರೆ. ಹಾಗಾಗಿ ಇದು ಮಹಿಳೆಯರ ಹಬ್ಬ ಎಂದೇ ಹೆಸರುವಾಸಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X