Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸುಧರ್ಮ ರಥಯಾತ್ರೆಗೆ ಚಾಲನೆ

ಉಡುಪಿ: ಸುಧರ್ಮ ರಥಯಾತ್ರೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Oct 2017 9:22 PM IST
share
ಉಡುಪಿ: ಸುಧರ್ಮ ರಥಯಾತ್ರೆಗೆ ಚಾಲನೆ

ಉಡುಪಿ, ಅ.25: ಮುಂದಿನ ನ.24, 25 ಮತ್ತು 26ರಂದು ಉಡುಪಿಯಲ್ಲಿ ನಡೆಯಲಿರುವ ಹಿಂದೂ ಸಮಾಜದ ಪ್ರಮುಖ ಪೀಠಾಧಿಪತಿಗಳು ಹಾಗೂ ಸಂತರ ಧರ್ಮ ಸಂಸದ್‌ನ ಪ್ರಚಾರಾರ್ಥ ಹಮ್ಮಿಕೊಳ್ಳಲಾದ ‘ಸುಧರ್ಮ ರಥಯಾತ್ರೆ’ಗೆ ಬುಧವಾರ ಇಲ್ಲಿ ಚಾಲನೆ ನೀಡಲಾಯಿತು.

ರಥಯಾತ್ರೆಗೆ ಉಡುಪಿಯ ನ್ಯಾಯವಾದಿ ಪ್ರವೀಣ್ ಪೂಜಾರಿ ಚಾಲನೆ ನೀಡಿ ಮಾತನಾಡಿ, ಪೇಜಾವರಶ್ರೀಗಳ ಪರ್ಯಾಯ ಸಂದರ್ಭದಲ್ಲಿ ಎರಡನೇ ಬಾರಿಗೆ ನಡೆದಿರುವ ಧರ್ಮಸಂಸದ್‌ನಲ್ಲಿ ಹಿಂದೂ ಧರ್ಮದ ಪುನರುತ್ಧಾನಕ್ಕೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಶ್ವಹಿಂದು ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಎಂ.ಬಿ.ಪುರಾಣಿಕ್ ಮಾತನಾಡಿ, ಧರ್ಮಸಂಸದ್ ಮೂಲಕ ಹಿಂದು ಧರ್ಮವನ್ನು ಟೀಕಿಸುವವರಿಗೆ ಬಲವಾದ ಸಂದೇಶವನ್ನು ನೀಡಲಾಗುವುದು ಎಂದರು. ದೇಶದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಬದಲಾವಣೆ ಕಾಲ ಸನ್ನಿಹಿತವಾಗಿದ್ದು, ಇದಕ್ಕೆ ಸಮಸ್ತ ಹಿಂದುಗಳು ಕೈಜೋಡಿಸಬೇಕು ಎಂದರು.

ಬಜರಂಗದಳ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 250ಕ್ಕೂ ಅಧಿಕ ಕಡೆಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸಲಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಈ ರಥಯಾತ್ರೆಯು ಇಂದಿನಿಂದ ನ.24ರವರೆಗೆ ಬೈಂದೂರು, ಕುಂದಾಪುರ, ಬ್ರಹ್ಮಾವರ, ಕಾರ್ಕಳ, ಕಾಪು, ಉಡುಪಿ ಗ್ರಾಮಾಂತರ ಹಾಗೂ ಉಡುಪಿ ನಗರ ಗಳಲ್ಲಿ ಸಂಚರಿಸಲಿದ್ದು, ಪ್ರತಿ ಊರಿನಲ್ಲೂ ಧರ್ಮಸಂಸದ್ ಸಂದೇಶವನ್ನು ಜನರಿಗೆ ತಲುಪಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿಹಿಂಪನ ಜಿಲ್ಲಾಧ್ಯಕ್ಷ ಪಿ.ವಿಲಾಸ್ ನಾಯಕ್, ಬಜರಂಗ ದಳದ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ವಿಹಿಂಪ ಪ್ರಾಂತ ಕಾರ್ಯದರ್ಶಿ ಕೃಷ್ಣಮೂರ್ತಿ, ಉಡುಪಿ ನಗರಾಧ್ಯಕ್ಷ ಸಂತೋಷ್ ಸುವರ್ಣ ಉದ್ಯಾವರ ಉಪಸ್ಥಿತರಿದ್ದರು.

ಬಜರಂಗದಳದ ಮಂಗಳೂರು ವಿಭಾಗ ಸಹಸಂಚಾಲಕ ಸುನಿಲ್ ಕೆ.ಆರ್. ಸ್ವಾಗತಿಸಿದರೆ, ಮಾಧ್ಯಮ ಪ್ರಮುಖ್ ಭಾಗ್ಯಶ್ರೀ ಐತಾಳ್ ಕಾರ್ಯಕ್ರಮ ನಿರೂಪಿಸಿದರು. ವಿಹಿಂಪ ಜಿಲ್ಲಾ ಕಾರ್ಯದರ್ಶಿ ರತ್ನಾಕರ ಅಮೀನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X