ಭಯೋತ್ಪಾದಕರಿಗೆ ಪೋಷಣೆ ಆರೋಪ: ಪಾಕಿಸ್ತಾನದ ನೆರವಿಗೆ ಧಾವಿಸಿದ ಚೀನಾ

ಬೀಜಿಂಗ್, ಅ. 26: ಪಾಕಿಸ್ತಾನ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದೆ ಎಂಬುದಾಗಿ ಭಾರತ ಮತ್ತು ಅಮೆರಿಕ ಮಾಡಿರುವ ಆರೋಪಗಳನ್ನು ತಳ್ಳಿಹಾಕಿರುವ ಚೀನಾ, ಪಾಕಿಸ್ತಾನದ ನೆರವಿಗೆ ಧಾವಿಸಿದೆ ಹಾಗು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ಪ್ರಯತ್ನಗಳನ್ನು ಶ್ಲಾಘಿಸಿದೆ.
‘‘ಭಯೋತ್ಪಾದನೆ ನಿಗ್ರಹ ಹೋರಾಟದಲ್ಲಿ ಪಾಕಿಸ್ತಾನ ಮುಂಚೂಣಿಯಲ್ಲಿದೆ. ಭಯೋತ್ಪಾದನೆಯನ್ನು ಎದುರಿಸಲು ಪಾಕಿಸ್ತಾನ ಹಲವಾರು ವರ್ಷಗಳಿಂದ ಧನಾತ್ಮಕ ಪ್ರಯತ್ನಗಳನ್ನು ಮಾಡುತ್ತಿದೆ ಹಾಗೂ ಈ ಪ್ರಕ್ರಿಯೆಯಲ್ಲಿ ಭಾರೀ ತ್ಯಾಗವನ್ನೂ ಮಾಡಿದೆ’’ ಎಂದು ಚೀನಾ ವಿದೇಶ ಸಚಿವಾಲಯ ವಕ್ತಾರ ಗೆಂಗ್ ಶುವಂಗ್ ಹೇಳಿದರು.
ತನ್ನ ನೆಲದಲ್ಲಿರುವ ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿದೇಶ ಸಚಿವೆ ಸುಶ್ಮಾ ಸ್ವರಾಜ್ ಮತ್ತು ಅಮೆರಿಕದ ವಿದೇಶ ಕಾರ್ಯದರ್ಶಿ ರೆಕ್ಸ್ ಟಿಲರ್‌ಸನ್ ಪಾಕಿಸ್ತಾನಕ್ಕೆ ಸೂಚಿಸಿದ ಒಂದು ದಿನದ ಬಳಿಕ ಚೀನಾ ಈ ಪ್ರತಿಕ್ರಿಯೆ ನೀಡಿದೆ.
Next Story





