Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡದ...

ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡದ ದಾಳಿ: ಪ್ರಕರಣ ದಾಖಲು

ತಂಬಾಕು ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ತಂಡ

ವಾರ್ತಾಭಾರತಿವಾರ್ತಾಭಾರತಿ26 Oct 2017 11:23 PM IST
share
ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡದ ದಾಳಿ: ಪ್ರಕರಣ ದಾಖಲು

ದಾವಣಗೆರೆ, ಅ.26: ಜಿಲ್ಲೆಯನ್ನು ಧೂಮಪಾನ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ತಂಬಾಕಿನ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದಲ್ಲಿ ಗುರುವಾರ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ತಂಡದಿಂದ ದಾಳಿ ನಡೆಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ, ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತ್ರಿಪುಲಾಂಬ ನೇತೃತ್ವದಲ್ಲಿ ತಂಡ ರಚಿಸಿಕೊಂಡು ನಗರದಲ್ಲ್ಲ್ಲಿ ದಾಳಿ ನಡೆಸಿ, ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4ರ ಅಡಿ 14 ಪ್ರಕರಣ ದಾಖಲಿಸಿ, ರೂ. 1,850 ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.

ತಂಡವು ನಗರದ ಅರುಣಾ ಟಾಕೀಸ್ ಸುತ್ತಮುತ್ತ ಹಾಗೂ ಎವಿಕೆ ಕಾಲೇಜು ರಸ್ತೆ ಸುತ್ತಮುತ್ತಲಿನ ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್, ಪಾನ್‌ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲಕರು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿ, ಫಲಕಗಳನ್ನೂ ಸ್ಥಳದಲ್ಲಿಯೇ ವಿತರಿಸಲಾಯಿತು.

ಕೊಟ್ಪಾಕಾಯ್ದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‌ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧಿಸಿರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಂಗಾಧರ್, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜನಾಧಿಕಾರಿ ಮಹಾಂತೇಶ್ ಬಿ ಉಳ್ಳಾಗಡ್ಡಿ, ಆಹಾರ ಸಂರಕ್ಷಣಾಧಿಕಾರಿ ಕೊಟ್ರೇಶ್, ಆರೋಗ್ಯ ಮೇಲ್ವಿಚಾರಕ ಆರ್ ವಿ ಕುಪಸ್ತ, ಆರೋಗ್ಯ ಸಹಾಯಕರಾದ ಲೋಕೇಶ್ ಮತ್ತು ವೆಂಕಟಾಚಲ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X