ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ ಏಳು ವರ್ಷ ಕಠಿಣ ಸಜೆ
ದಾವಣಗೆರೆ, ಅ.26: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಇಲ್ಲಿನ 2 ನೆ ಹೆಚ್ಚುವರಿ ಸೆಷನ್ಸ್ ಹಾಗೂ ವಿಶೇಷ ನ್ಯಾಯಾಲಯ (ಪೋಕ್ಸೋ) ಮತ್ತು 10 ಸಾವಿರ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಘಟನೆ ವಿವರ: 7-7-2016 ರಂದು ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದ ವಾಸಿ ಸಂತೋಷ ಕುರಿಗಳಿಗೆ ಹುಲ್ಲು ಕೊಯ್ಯುತ್ತಿದ್ದ ಬಾಲಕಿಯನ್ನು ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದನು.
ಈ ಸಂಬಂಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ( ಪೋಕ್ಸೊ) ಪ್ರಕರಣ ದಾಖಲಾಗಿಸಿಕೊಂಡು. 2012ರ ಅಡಿ ಮತ್ತು ಕಲಂ 506 ಐಪಿಸಿ ಪ್ರಕಾರ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಸಂಬಂಧ ದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ 506 ಐಪಿಸಿ ಅಡಿಯಲ್ಲಿ ವಿಶೇಷ ನ್ಯಾಯಲಯದ ನ್ಯಾಯಾಧೀಶೆ ಶ್ರೀಮತಿ ಎಸ್.ನಾಗಶ್ರೀ ಅವರು ಆರೋಪಿಗೆ ಏಳು ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ದಂಢ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ದಂಡದ ಹಣದಲ್ಲಿ ನೊಂದ ಬಾಲಕಿಗೆ ಪರಿಹಾರ ನೀಡುವಂತೆ ಆದೇಶಿಸಿದರು.
ಸರಕಾರದ ಪರವಾಗಿ ಶೌಕತ್ ಆಲಿ ಎಸ್.ಎಚ್.ಎಸ್. ವಿಶೇಷ ಸರಕಾರಿ ಅಭಿಯೋಜಕ ವಾದ ಮಂಡಿಸಿದ್ದರು.





